Latest

ಸಿಸಿಬಿ ಕಚೇರಿಯಲ್ಲಿ ನಟಿ ರಾಗಿಣಿ; ವಿಚಾರಣೆ ಆರಂಭ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ನಟಿ ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ಬೆಂಗಳೂರಿನ ಚಾಮರಾಜಪೇಟೆ ಸಿಸಿಬಿ ಕಚೇರಿಗೆ ಕರೆತಂದಿದ್ದು, ತೀವ್ರ ವಿಚಾರಣೆಗೆ ಒಲಪಡಿಸಿದ್ದಾರೆ.

ಇಂದು ಮುಂಜಾನೆ ಯಲಹಂಕದ ನಟಿ ರಾಗಿಣಿ ಅವರ ಅನನ್ಯ ಅಪಾರ್ಟ್ ಮೆಂಟ್ ನಲ್ಲಿರುವ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ರಾಗಿಣಿ ಅವರ ನಾಲ್ಕು ಮೊಬೈಲ್, ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದಿದ್ದರಲ್ಲದೇ, ನಟಿಯನ್ನು ವಶಕ್ಕೆ ಪಡೆದಿದ್ದರು.

ಇದೀಗ ನಟಿ ರಾಗಿಣಿಯವರನ್ನು ಚಾಮರಾಜಪೇಟೆ ಸಿಸಿಬಿ ಕಚೇರಿಗೆ ಕರೆತರಲಾಗಿದ್ದು, ಸಿಸಿಬಿ ಇನ್ಸ್ ಪೆಕ್ಟರ್ ಅಂಜುಮಾಲಾ ನಾಯಕ್ ಅವರ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button