Latest

ಮತ್ತೋರ್ವ ಡ್ರಗ್ಸ್ ಪೆಡ್ಲರ್ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ಮತ್ತೋರ್ವ ಡ್ರಗ್ಸ್ ಪೆಡ್ಲರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾರ್ತಿಕ್ ರಾಜು ಎಂದು ತಿಳಿದುಬಂದಿದೆ. ಈಗಾಗಲೇ ಬಂಧಿತನಾಗಿರುವ ಆರ್ ಟಿಒ ಅಧಿಕಾರಿ ರವಿಶಂಕರ್ ನೀಡಿದ ಮಾಹಿತಿ ಮೇರೆಗೆ ಕಾರ್ತಿಕ್ ರಾಜುನನ್ನು ಬಂಧಿಸಲಾಗಿದೆ.

Home add -Advt

ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ನಂಟು ಪ್ರಕರಣ ಸಂಬಂಧ ನಿನ್ನೆ ನಟಿ ರಾಗಿಣಿ ಆಪ್ತ, ಆರ್ ಟಿ ಒ ಅಧಿಕಾರಿ ರವಿಶಂಕರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೇ ಪ್ರಕರಣ್ ಅಸಂಬಂಧ ನಟಿ ಸಂಜನಾ ಗಲ್ರಾಣಿ ಆಪ್ತ ರಾಹುಲ್ ಎಂಬಾತನನ್ನೂ ವಶಕ್ಕೆ ಪಡೆಯಲಾಗಿತ್ತು. ಈ ಇಬ್ಬರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಒಬ್ಬರ ಹೆಸರನ್ನೇ ಬಾಯ್ಬಿಡುತ್ತಿದ್ದಾರೆ.

ವಿಚಾರಣೆ ವೇಳೆ ರವಿಶಂಕರ್ ನೀಡಿದ ಮಾಹಿತಿ ಮೇರೆಗೆ ಇನ್ನೋರ್ವ ಡ್ರಗ್ಸ್ ಪೆಡ್ಲರ್ ಕಾರ್ತಿಕ್ ರಾಜುನನ್ನು ಸಿಸಿಬಿ ಇದೀಗ ವಶಕ್ಕೆ ಪಡೆದಿದೆ. ಇನ್ನೂ ಹಲವರು ಈ ದಂಧೆಯಲ್ಲಿ ಭಾಗಿಯಾಗಿದ್ದು, ವಿಚಾರಣೆ ವೇಳೆ ಹಲವು ನಟ-ನಟಿಯರ ಹೆಸರನ್ನು ಕೂಡ ಹೇಳಲಾಗಿದೆ ಎಂದು ತಿಳಿದುಬಂದಿದೆ.

Related Articles

Back to top button