ಕಿಚ್ಚ ಸುದೀಪ್ ಗೆ ’ಕನ್ನಡ ಚಿತ್ರರಂಗದ ಹೆಮ್ಮೆ’ ಗರಿ

ಬೆಂಗಳೂರು: ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್ ’ಕನ್ನಡ ಚಿತ್ರರಂಗದ ಹೆಮ್ಮೆ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ’ಜೀ ಸಿನಿ ಅವಾರ್ಡ್ಸ್ 2020′ ಕನ್ನಡ ಚಿತ್ರರಂಗದ ಶ್ರೇಷ್ಠ ನಟನನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಿದೆ.

ಚೆನ್ನೈನಲ್ಲಿ ನಡೆದ ‘ಜೀ ತಮಿಳು ಸಿನಿ ಅವಾರ್ಡ್ಸ್’ ಕಾರ್ಯಕ್ರಮದಲ್ಲಿ ನಟ ಕಿಚ್ಚ ಸುದೀಪ್ ಭಾಗವಹಿಸಿದ್ದರು. ಈ ವೇಳೆ ಅವರಿಗೆ ‘ಕನ್ನಡ ಚಿತ್ರರಂಗದ ಹೆಮ್ಮೆ’ ಪ್ರಶಸ್ತಿ ಪ್ರದಾನ ಮಾಡಿ ನೀಡಿ ಗೌರವಿಸಲಾಯಿತು.

ಈ ವೇಳೆ ಮಾತನಾಡಿದ ಕಿಚ್ಚ ಸುದೀಪ್,  ವರ್ಷಗಳ ಬಳಿಕ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ವಿಚಿತ್ರವೆನಿಸಿದೆ ಹಾಗೆಯೇ ಖುಷಿ ಕೂಡ ನೀಡಿತು ಎಂದಿದ್ದಾರೆ.

ಸಾಮಾನ್ಯವಾಗಿ ಪ್ರಶಸ್ತಿ ಪ್ರಧಾನ ಸಮಾರಂಭಗಳಿಂದ ದೂರವೇ ಉಳಿದಿರುವ ಕಿಚ್ಚ 17 ವರ್ಷಗಳಿಂದ ಯಾವುದೇ ಪ್ರಶಸ್ತಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಕಿಚ್ಚ  ’ಕನ್ನಡ ಚಿತ್ರರಂಗದ ಹೆಮ್ಮೆ’ ಪ್ರಶಸ್ತಿ ಸ್ವೀಕರಿದ್ದು, ಅಭಿಮಾನಿಗಳ ಸಂಭ್ರಮಕ್ಕೆ ಕಾರಣರಾಗಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button