
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸದಾ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವ ನಟಿ ಪಾರುಲ್ ಯಾದವ್ ಇದೀಗ ಹೊಸ ಫೋಟೋಶೂಟ್ ಮಾಡಿಸಿದ್ದು, ತಮ್ಮ ಗ್ಲಾಮರಸ್ ಲುಕ್ ನ ಫೋಟೋಗಳನ್ನು ಇನ್ ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ.
ತಿಳಿ ನೀಲಿ ಬಣ್ಣದ ಉಡುಗೆಯಲ್ಲಿ ಮಿಂಚಿರುವ ಪಾರುಲ್, ಸಖತ್ ಹಾಟ್ ಲುಕ್ ನಲ್ಲಿ ಕ್ಯಾಮರಾಗೆ ಪೋಸ್ ನೀಡಿದ್ದಾರೆ.
2018ರಲ್ಲಿ ತೆರೆಕಂಡ ಸೀಜರ್ ಚಿತ್ರದ ಬಳಿಕ ಪಾರುಲ್ ಬೇರಾವ ಚಿತ್ರದಲ್ಲಿ ಕಾಣಿಸಿಕೊಂಡಿಲ್ಲ. ರಮೇಶ್ ಅರವಿಂದ್ ನಿರ್ದೇಶನದ ಬಟರ್ ಫ್ಲೈ ಚಿತ್ರದಲ್ಲಿ ಪಾರುಲ್ ಅಭಿನಯಿಸಿದ್ದರಾದರೂ ಕಾರಣಾಂತರಗಳಿಂದ ಸಿನಿಮಾ ಬಿಡುಗಡೆ ತಡವಾಗುತ್ತಿದೆ. ಇನ್ನು ಇತ್ತೀಚೆಗಷ್ಟೇ ಪಾರುಲ್ ಕೊರೊನಾ ಸೋಂಕಿನಿಂದ ಬಳಲಿ ಗುಣಮುಖರಾಗಿದ್ದಾರೆ. ಸದ್ಯ ಹೊಸ ಫೋಟೋಶೂಟ್ ನಲ್ಲಿ ಭಾಗಿಯಾಗಿರುವ ಪಾರುಲ್ ತಮ್ಮ ಗ್ಲಾಮರಸ್ ಲುಕ್ ಫೋಟೋಗಳನ್ನು ಶೇರ್ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ