Latest

‘ನಾ ನಿನ್ನ ಬಿಡಲಾರೆ…’ ಖ್ಯಾತಿಯ ಹಿರಿಯ ನಿರ್ಮಾಪಕ ಸಿ.ಜಯರಾಮ್ ನಿಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡದಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ ಸಿ.ಜಯರಾಮ್ ವಿಧಿವಶರಾಗಿದ್ದಾರೆ.

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿಯೇ ಹಿರಿಯ ನಿರ್ಮಾಪಕರನ್ನು ಕಳೆದುಕೊಂಡಿದ್ದು, ಇಡೀ ಚಿತ್ರರಂಗ ಕಂಬನಿ ಮಿಡಿದಿದೆ. ಕನ್ನಡದ ಹಲವು ಸ್ಟಾರ್ ನಟರ ಚಿತ್ರಗಳಿಗೆ ಜಯರಾಮ್ ಬಂಡವಾಳ ಹೂಡಿದ್ದರು.

Home add -Advt

ಶಂಕರ್ ನಾಗ್ ಅಭಿನಯದ ಆಟೋ ರಾಜ, ಅನಂತ್ ನಾಗ್ ಅಭಿನಯದ ‘ನಾ ನಿನ್ನ ಬಿಡಲಾರೆ’, ವಿಷ್ಣುವರ್ಧನ್ ಹಾಗೂ ರಜನಿಕಾಂತ್ ಅಭಿನಯದ ‘ಗಲಾಟೆ ಸಂಸಾರ’, ಶ್ರೀನಾಥ್-ಆರತಿ ಅಭಿನಯದ ‘ಪಾವನ ಗಂಗಾ’ ಮುಂತಾದ ಜನಪ್ರಿಯ ಚಿತ್ರಗಳನ್ನು ಜಯರಾಮ್ ನಿರ್ಮಿಸಿದ್ದರು. ಸಿ.ಜಯರಾಮ್ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ಸುಮ್ಮನಹಳ್ಳಿ ರುದ್ರಭೂಮಿಯಲ್ಲಿ ನಡೆಯಲಿದೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ದುರ್ಮರಣ

Related Articles

Back to top button