
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಟಿಯೊಂದಿಗೆ ಪ್ರೀತಿ-ಪ್ರೇಮದ ನಾಟಕವಾಡಿ, ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಪ್ರಕರಣ ಸಂಬಂಧ ಸ್ಯಾಂಡಲ್ ವುಡ್ ನಿರ್ಮಾಪಕ ಕಮ್ ಹಿರೋನನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
’ವಿಷನ್-2023’ ಸಿನಿಮಾ ನಾಯಕ ಕಮ್ ನಿರ್ಮಾಪಕ ಹರ್ಷವರ್ಧನ್ ಅಲಿಯಾಸ್ ವಿಜಯ ಭಾರ್ಗವ ಸಹನಟಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ಹೇಳಿ ನಂಬಿಸಿ ಅತ್ಯಾಚಾರವೆಸಗಿದ್ದು, ನಟಿ ನೀಡಿದ ದೂರಿನ ಮೇರೆಗೆ ಇದೀಗ ನಿರ್ಮಾಪಕನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಲಾಗಿದೆ.
ನಿರ್ಮಾಪಕ ಹರ್ಷವರ್ಧನ್ ಅಲಿಯಾಸ್ ವಿಜಯ ಭಾರ್ಗವ ಕಳೆದ ಎರಡು ವರ್ಷಗಳಿಂದ ತನ್ನನ್ನು ದೈಹಿಕವಾಗಿ ಬಳಸಿಕೊಳ್ಳುತ್ತಿದ್ದು, ಈಗ ಮದುವೆ ಬಗ್ಗೆ ಕೇಳಿದರೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕೊಲೆ ಬೆದರಿಕೆಯೊಡ್ಡುತ್ತಿದ್ದಾನೆ ಎಂದು ಸಂತ್ರಸ್ತ ನಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಿರ್ಮಾಪಕ ಹರ್ಷವರ್ಧನ್ ವಿರುದ್ಧ ಐಪಿಸಿ ಸೆಕ್ಷನ್ 417, 376, 504, 506 ಅಡಿ ಪ್ರಕರಣ ದಾಖಲಾಗಿದ್ದು, ನಟಿಯನ್ನು ವೈದ್ಯಕೀಯ ತಪಾಸಣೆ ನಡೆಸಿ ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.
ಎರಡೇ ದಿನದಲ್ಲಿ ನೌಕರಿ ನೀಡಿ ಮಾನವೀಯತೆ ಮೆರೆದ ಡಿಸಿ ಯಶವಂತ ವಿ. ಗುರುಕರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ