Latest

ಸ್ಯಾಂಡಲ್ ವುಡ್ ನಟಿ ಸಿಸಿಬಿ ಪೊಲೀಸರ ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಬೆಳಮ್ ಬೆಳಿಗ್ಗೆ ನಟಿ ರಾಗಿಣಿ ದ್ವಿವೇದಿ ಮನೆ ಮೇಲೆ ದಾಳಿ ನಡೆಸಿದ್ದರು. ರಾಗಿಣಿ ಮನೆಯಲ್ಲಿ ಶೋಧಕಾರ್ಯ ನಡೆಸಿದ ಸಿಸಿಬಿ ನಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯಲಹಂಕದ ಅನನ್ಯ ಅಪಾರ್ಟ್ ಮೆಂಟ್ ನಲ್ಲಿರುವ ರಾಗಿಣಿ ನಿವಾಸದ ಮೇಲೆ ಸಿಸಿಬಿ ಅಧಿಖಾರಿ ಅಂಜುಮಾಲಾ ನಾಯಕ್ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮೂರುಗಂಟೆಗಳ ಕಾಲ ಶೋಧ ನಡೆಸಿದ್ದಾರೆ. ಬಳಿಕ ರಾಗಿಣಿಯವರನ್ನು ವಶಕ್ಕೆ ಪಡೆದಿದ್ದಾರೆ.

Home add -Advt

ನಟಿಯ ಮನೆಯ ಮೂಲೆ ಮೂಲೆಯಲ್ಲೂ ಶೋಧ ನಡೆಸಿರುವ ಅಧಿಕಾರಿಗಳು, ನಟಿಗೆ ಸೇರಿದ ನಾಲ್ಕು ಮೊಬೈಲ್, ಕಾರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ರಾಗಿಣಿ ನಿವಾಸದಲ್ಲೇ ಸಧ್ಯ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Related Articles

Back to top button