ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲೇ ಹೃಧಯಾಘಾತಕ್ಕೀಡಾಗಿ ಹಿರಿಯ ನಟ ರಾಕ್ ಲೈನ್ ಸುಧಾಕರ್ ವಿಧಿವಶರಾಗಿದ್ದಾರೆ.
ಸಿಂಪಲ್ ಸುನಿ ನಿರ್ದೇಶನದ ಸಿನಿಮಾ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ರಾಕ್ ಲೈನ್ ಸುಧಾಕರ್, ಶೂಟಿಂಗ್ ವೇಳೆ ಕುಸಿದು ಬಿದ್ದಿದ್ದಾರೆ. ಹೃದಯಾಘಾತದಿಂದ ಅವರು ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ನಿರ್ದೇಶಕ ಸುನಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, 2020ರ ರೌದ್ರಾವತಾರ ಮುಂದುವರೆದಿದೆ. ಸಿನಿ ಕಲಾವಿದರಾದ ರಾಕ್‍ಲೈನ್ ಸುಧಾಕರ್ ಅವರು ಇಂದು ಮೇಕಪ್ ಹಚ್ಚಿರುವಾಗಲೇ ಹೃದಯಘಾತದಿಂದ ನಮ್ಮನ್ನೆಲ್ಲಾ ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಓಂ ಶಾಂತಿ ಎಂದು ಸಂತಾಪ ಸೂಚಿಸಿದ್ದಾರೆ.
ಅಜಿತ್, ಉಡುಂಬಾ, ಟೋಪಿವಾಲಾ, ಜೂಮ್, ಚಮಕ್, ಪಟಾಕಿ ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಸುಧಾಕರ್ ಅಭಿನಯಿಸಿದ್ದರು. ರಾಕ್ ಲೈನ್ ಸುಧಾಕರ್ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ