Latest

ಕೊರೊನಾ ಸೋಂಕಿಗೆ ಕನ್ನಡ ಚಿತ್ರರಂಗದ ಖ್ಯಾತ ನಟ ಬಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆದಿದ್ದು, ಇಂದು ಹೆಮ್ಮಾರಿಗೆ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ ಬಲಿಯಾಗಿದ್ದಾರೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಗಂಗಾಧರಯ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.

Home add -Advt

ಶಬ್ದವೇದಿ, ಕುರಿಗಳು ಸರ್ ಕುರಿಗಳು, ನೀರ್ ದೋಸೆ, ಅಪ್ಪು, ಕ್ವಾಟ್ಲೆ ಸತೀಶ, ಕರ್ವ, ಪಾಪಿಗಳ ಲೋಕದಲ್ಲಿ ಸೇರಿದಂತೆ 118ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಗೂ 1500ಕ್ಕೂ ಹೆಚ್ಚು ನಾಟಕಗಳಲ್ಲಿ ಮತ್ತು ಹಲವಾರು ಧಾರವಾಹಿಗಳಲ್ಲಿ ಹುಲಿವಾನ್ ಗಂಗಾಧರಯ್ಯ ಅವರು ನಟಿಸಿದ್ದರು.

ಚಿತ್ರೀಕರಣದ ಸಂದರ್ಭದಲ್ಲಿ ಇವರಿಗೆ ಜ್ವರ ಕಾಣಿಸಿಕೊಂಡಿತ್ತು. ಆ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.

Related Articles

Back to top button