ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ್ ದೀಪ್ ರಾಯ್ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
73 ವರ್ಷದ ಮನ್ ದೀಪ್ ರಾಯ್, ಬೆಂಗಳೂರಿನ ಕಾವಲ್ ಭೈರಸಂದ್ರದ ನಿವಾಸದಲ್ಲಿ ನಿನ್ನೆ ರಾತ್ರಿ 1:45ರ ಸುಮಾರಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಪುತ್ರಿ ಅಕ್ಷತಾ ತಿಳಿಸಿದ್ದಾರೆ.
ಮನ್ ದೀಪ್ ರಾಯ್ ಅವರಿಗೆ ಕಳೆದ ಡಿಸೆಂಬರ್ ನಲ್ಲಿ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಆರೋಗ್ಯ ಸುಧಾರಿಸಿತ್ತು. ಆದರೆ ತಡರಾತ್ರಿ ಏಕಾಏಕಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮನ್ ದೀಪ್ ರಾಯ್ ಅವರು ಡಾ.ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್, ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವು ನಾಯಕ ನಟರೊಂದಿಗೆ ಅಭಿನಯಿಸಿದ್ದರು.
500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಹಿರಿಯ ನಟನ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.
ಇಂದು ಬೆಳಿಗ್ಗೆ 11ಗಂಟೆಗೆ ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿ ಮನ್ ದೀಪ್ ರಾಯ್ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಲೀದುಬಂದಿದೆ.
*ಮೂವರು ಮಕ್ಕಳೊಂದಿಗೆ ನೀರಿನ ಸಂಪ್ ಗೆ ಹಾರಿ ತಾಯಿ ಆತ್ಮಹತ್ಯೆ*
https://pragati.taskdun.com/mother3-childrensuicidevijayapura/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ