*ಸ್ಯಾಂಡಲ್ ವುಡ್ ನಲ್ಲಿಯೂ ಕಾಸ್ಟಿಂಗ್ ಕೌಚ್: ಸಿಎಂ ಭೇಟಿಯಾಗಿ ಸಮಿತಿ ರಚಿವಂತೆ ಮನವಿ ಮಾಡಿದ ಫೈರ್ ಸಂಸ್ಥೆ*
ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದಲ್ಲಿಯೂ ಕಾಸ್ಟಿಂಗ್ ಕೌಚ್, ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಈ ನಿಟ್ಟಿನಲ್ಲಿ ಮಲಯಾಳಂ ಚಿತ್ರರಂಗದ ಮಾದ ಜಸ್ಟಿಸ್ ಹೇಮಾ ಸಮಿತಿ ಮಾದರಿಯಲ್ಲಿ ಕನ್ನಡ ಚಿತ್ರರಂಗದಲ್ಲಿಯೂ ಸಮಿತಿ ರಚಿವಂತೆ ಒತ್ತಾಯಿಸಿ ಫೈರ್ ಸಂಸ್ಥೆ ಸದಸ್ಯರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ನಟ ಚೇತನ್ ಕುಮಾರ್ ನೇತೃತ್ವದಲ್ಲಿ ಫೈರ್ ಸಂಸ್ಥೆ ಸದಸ್ಯರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿವಂತೆ ಮನವಿ ಪತ್ರ ಸಲ್ಲಿಸಿದರು.
ಮನವಿ ಪತ್ರಕ್ಕೆ ನಟ ಸುದೀಪ್, ನಿರ್ದೇಶಕ ಸುನಿ, ರಮ್ಯಾ, ನೀತು, ಚೇತನ್ ಅಹಿಂಸಾ, ಮಾನ್ವಿತಾ, ಶೃತಿ ಹರಿಹರನ್, ಪತ್ರಕರ್ತೆ ವಿಜಯಮ್ಮ, ಸಾಹಿತಿಗಳು ಸೇರಿದಂತೆ 150ಕ್ಕೂ ಹೆಚ್ಚು ಜನರು ಸಹಿ ಹಾಕಿದ್ದು, ಈ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಮಿತಿ ರಚನೆ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಈ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸುವ ನಿಟ್ಟಿನಲ್ಲಿ ಮತ್ತೊಮ್ಮೆ ಸಭೆ ಕರೆಯುವುದಾಗಿ ಭರವಸೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ