
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿನಿಮಾ ಚಿತ್ರೀಕರಣದ ವೇಳೆಯೇ ತೀವ್ರ ಅನಾರೋಗ್ಯಕ್ಕೀಡಾಗಿರುವ ನಟ ಶರಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿರುವ ನಟನಿಗೆ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಹೊಟ್ಟೆನೋವಿನಿಂದ ಶರಣ್ ಬಳಲುತ್ತಿದ್ದರು ಎನ್ನಲಾಗಿದೆ.
ನಗರದ ಹೆಚ್ ಎಂ ಟಿ ಗ್ರೌಂಡ್ ನಲ್ಲಿ ಶರಣ್ ಅವರ ಹೊಸ ಚಿತ್ರ ಅವತಾರ ಪುರುಷದ ಶೂಟಿಂಗ್ ನಡೆಯುತ್ತಿದ್ದು, ಶೂಟಿಂಗ್ ನಲ್ಲಿ ಭಾಗಿಯಾಗಿದ್ದ ವೇಳೆಯೇ ಅವರಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ