ಲಾಕ್ ಡೌನ್ ನಿಯಮವಿದ್ದರೂ ಜಾಲಿ ರೈಡ್ ಮಾಡಿ ಅಪಘಾತಕ್ಕೀಡಾದ ಸ್ಯಾಂಡಲ್ ವುಡ್ ನಟಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮವಾಗಿ ದೇಶಾದ್ಯಂತ ಲಾಕ್ ಲಾಕ್ ಡೌನ್ ಘೋಷಿಸಲಾಗಿದ್ದರೂ ಕೆಲವರು ಬೇಜವಾಬ್ದಾರಿಯಿಂದ ರಸ್ತೆಗಳಲ್ಲಿ ಓಡಾಟ ನಡೆಸಿದ್ದಾರೆ. ವಿಚಿತ್ರವೆಂದರೆ ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಾಬೇಕಾದ ನಟ-ನಟಿಯರೇ ರಸ್ತೆಯಲ್ಲಿ ಓಡಾಟ ನಡೆಸಿ ಜವಾಬ್ದಾರಿ ಮರೆತಿದ್ದಾರೆ.

ಸ್ಯಾಂಡಲ್ ವುಡ್ ನಟಿ ಶರ್ಮಿಳಾ ಮಾಂಡ್ರೆ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಐಶಾರಾಮಿ ಕಾರಲ್ಲಿ ಜಾಲಿರೈಡ್ ಹೋಗಿ ಅಂಡರ್ ಪಾಸ್ ಪಿಲ್ಲರ್ ಗೆ ಕಾಅರು ಗುದ್ದಿ ಅಪಘಾತಕ್ಕೀಡಾಗಿದ್ದಾರೆ. ಇಂದು ನಸುಕಿನ ಜಾವ 3 ಗಂಟೆ ವೇಳೆಗೆ ಬೆಂಗಳೂರಿನ ವಸಂತನಗರ ಬಳಿ ಈ ಘಟನೆ ನಡೆದಿದ್ದು, ಪ್ರಾಥಮಿಕ ತನಿಖೆಯಲ್ಲಿ ಇದು ಡ್ರಂಕ್ ಆ್ಯಂಡ್ ಡ್ರೈವ್ ಕೇಸ್ ಎಂದು ತಿಳಿದು ಬಂದಿದೆ.

ಶರ್ಮಿಳಾ ಮಾಂಡ್ರೆ ಜಾಗ್ವರ್ ಕಾರಿನಲ್ಲಿ ತನ್ನ ಸ್ನೇಹಿತರ ಜೊತೆ ರಾತ್ರಿ ಹೊತ್ತಲ್ಲಿ ಜಾಲಿ ರೈಡ್ ಮಾಡಿದ್ದಾರೆ. ವಸಂತನಗರ ಅಂಡರ್‍ಪಾಸ್ ಪಿಲ್ಲರ್‍ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಶರ್ಮಿಳಾ ಮಾಂಡ್ರೆ ಮುಖ ಹಾಗೂ ಕೈಗೆ ಗಾಯವಾಗಿದೆ. ಕಾರಿನಲ್ಲಿದ್ದ ಒಬ್ಬ ಸ್ನೇಹಿತನಿಗೆ ಕೈ ಫ್ರಾಕ್ಚರ್ ಆಗಿದ್ದು, ಇಬ್ಬರೂ ಖಾಸಿಗೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button