Film & EntertainmentLatest

*ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Home add -Advt

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ತಮ್ಮ ನಿವಾಸದಲ್ಲಿ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಮಗಳು ಸೌಂದರ್ಯ ಅವರ ವಿವಾಹ ಮಾಡಿದ್ದರು.

ಆತ್ಮಹತ್ಯೆಗೆ ಯತ್ನಿಸಿದ್ದ ಸೌಂದರ್ಯ ಜಗದೀಶ್ ಅವರನ್ನು ಕುಟುಂಬದವರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಅಪ್ಪು-ಪಪ್ಪು, ಸ್ನೇಹಿತರು, ಮಸ್ತ್ ಮಜಾ ಮಾಡಿ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿದ್ದರು.

Related Articles

Back to top button