ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶಾದ್ಯಂತ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಈಗಾಗಾಲೇ ಕಟ್ಟುನಿಟ್ಟಿನ ಲಾಕ್ ಡೌನ್ ಕೂಡ ಜಾರಿಯಿಗೆ. ಲಾಕ್ ಡೌನ್ ನಿಂದಾಗಿ ಬಡವರು, ಕೂಲಿ ಕಾರ್ಮಿಕರು ಮತ್ತು ನಿರ್ಗತಿಕರು ಸೇರಿದಂತೆ ಅನೇಕರು ಊಟವಿಲ್ಲದೆ ಪರಾಡುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಚಿತ್ರರಂಗ ಕೂಡ ಸಂಪೂರ್ಣ ಬಂದ್ ಆಗಿದ್ದು, ಸಿನಿಮಾ ಕಾರ್ಮಿಕರು ಕೂಡ ಹೊತ್ತಿನ ಊಟಕ್ಕಾಗಿ ಸಂಕಷ್ಟ ಸ್ಥಿತಿ ತಲುಪಿದ್ದಾರೆ.
ಚಿತ್ರರಂಗದ ಕಾರ್ಮಿಕರಿಗೆ ಈಗಗಾಲೇ ಹಲವು ನಟ-ನಟಿಯರು, ನಿರ್ಮಾಪಕರು ಸಹಾಯಮಾಡುತ್ತಿದ್ದಾರೆ. ಚಿತ್ರರಂಗದ ಕಾರ್ಮಿಕರ ಸಂಕಷ್ಟ ಕಂಡ ರಿಯಲ್ ಸ್ಟಾರ್ ಉಪೇಂದ್ರ ಚಿತ್ರರಂಗದ ದಿನಗೂಲಿ ಕಾರ್ಮಿಕರಿಗೆ ಸಹಾಯ ಹಸ್ತ ಚಾಚಿದ್ದಾರೆ.
ಲಾಕ್‍ಡೌನ್‍ನಿಂದ ಸಿನಿಮಾ, ಸೀರಿಯಲ್ ಶೂಟಿಂಗ್ ಬಂದ್ ಆಗಿದೆ. ಇದರಿಂದ ಅನೇಕ ದಿನಗೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನಲೆಯಲ್ಲಿ ನಟ ಉಪೇಂದ್ರ ಕನ್ನಡ ಚಲನಚಿತ್ರ ಕಾರ್ಮಿಕ ಸಂಘಗಳ ಒಕ್ಕೂಟಕ್ಕೆ 4,50,000 ರೂಪಾಯಿಯನ್ನು ದೇಣಿಗೆಯಾಗಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಉಪೇಂದ್ರ, ಕನ್ನಡ ಚಲನಚಿತ್ರ ಕಾರ್ಮಿಕ ಸಂಘಗಳ ಒಕ್ಕೂಟದ ಒಟ್ಟು ಹದಿನೆಂಟು ಸಂಘಗಳಿಗೆ ತಲಾ 25 ಸಾವಿರದಂತೆ 4,50,000 ರೂಗಳನ್ನು ನೀಡುತ್ತಿದ್ದೇನೆ. ಆದಷ್ಟು ಬೇಗ ಈ ಕೊರೊನಾ ಸಮಸ್ಯೆಯಿಂದ ಎಲ್ಲರೂ ಹೊರಬರುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾ, ನಿಮ್ಮ ಜೊತೆ ಎಂದೆಂದೂ ನಾನಿರುತ್ತೇನೆ ವಿಶ್ವಾಸವಿರಲಿ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ