Latest

ರಿಯಲ್ ಸ್ಟಾರ್ ಉಪೇಂದ್ರ ಆಸ್ಪತ್ರೆಗೆ ದಾಖಲು; ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ ನಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಿತ್ರೀಕರಣದ ವೇಳೆ ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರುಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಯುಐ ಸಿನಿಮಾ ಚಿತ್ರೀಕರಣದಲ್ಲಿದ್ದ ನಟ ಉಪೇಂದ್ರ ಅವರಿಗೆ ಏಕಾಏಕಿ ಉಸಿರಾಟದ ಸಮಸ್ಯೆಯುಂಟಾಗಿದೆ. ತಕ್ಷಣ ನೆಲಮಂಗಲದ ಬಳಿಯ ಹರ್ಷಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ಬಳಿಕ ಇದೀಗ ಚೇತರಿಸಿಕೊಂಡಿದ್ದು, ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

Home add -Advt

ಯುಐ ಚಿತ್ರೀಕರಣದಲ್ಲಿ ಸ್ಮೋಕ್ ಎಫೆಕ್ಟ್ ನಲ್ಲಿ ಕೆಲ ದೃಶ್ಯ ಚಿತ್ರೀಕರಿಸಲಾಗುತಿತ್ತು. ಈ ವೇಳೆ ದಟ್ಟ ಹೊಗೆಯಿಂದಾಗಿ ಕೆಮ್ಮು ಶುರುವಾಗಿದ್ದರಿಂದ ಉಸಿರಾಟದ ಸಮಸ್ಯೆಯಾಗಿತ್ತು ಎನ್ನಲಾಗಿದೆ. ಹಾಗಾಗಿ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಕೆಲ ಸಮಯ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದಿದ್ದಾರೆ. ಬಳಿಕ ಆಸ್ಪತ್ರೆಯಿಂದ ಮತ್ತೆ ಚಿತ್ರೀಕರಣದ ಸ್ಥಳಕ್ಕೆ ತೆರಳಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

ಇನ್ನು ಆಸ್ಪತ್ರೆಗೆ ದಾಖಲಾದ ಬಗ್ಗೆ ಅಭಿಮಾನಿಗಳಲ್ಲಿ ಆತಂಕ ಎದುರಾದ ಹಿನ್ನೆಲೆಯಲ್ಲಿ,   ಸಾಮಾಜಿಕ ಜಾಲತಾಣಗಳಲ್ಲಿ ಮಾತನಾಡಿರುವ ನಟ ಉಪೇಂದ್ರ, ಸಧ್ಯ ಆರಾಮವಾಗಿದ್ದೇನೆ ನಾನು ಶೂಟಿಂಗ್ ಸ್ಪಾಟ್ ನಲ್ಲಿದ್ದೇನೆ. ಆತಂಕ ಪಡುವ ಅಗತ್ಯವಿಲ್ಲ. ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ; ಸ್ಫೋಟದ ಹೊಣೆಹೊತ್ತ ಉಗ್ರ ಸಂಘಟನೆ

https://pragati.taskdun.com/mangalore-blast-caseislamic-resistance-counciltemple-target/

Related Articles

Back to top button