ಪ್ರಗತಿವಾಹಿನಿ ಸುದ್ದಿ; ಮೈಸೂರು: ಮೈಸೂರು ಭಾಗದಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ. ಮಾಜಿ ಸಚಿವ ಎಚ್.ವಿಶ್ವನಾಥ್ ಕಾಂಗ್ರೆಸ್ ಸೇರುವುದು ಖಚಿತ ಎಂಬ ಸುದ್ದಿ ಬೆನ್ನಲ್ಲೇ ಮಾಜಿ ಎಂಎಲ್ಸಿ ಸಂದೇಶ್ ನಾಗರಾಜ್ ಕೂಡ ಬಿಜೆಪಿ ತೊರೆಯುವುದಾಗಿ ಘೋಷಿಸಿದ್ದಾರೆ.
ಇಂದು(ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸಂದೇಶ್ ನಾಗರಾಜ್, ನಾನು ಬಿಜೆಪಿಯಲ್ಲಿ ಸದ್ಯ ಸಕ್ರಿಯನಾಗಿಲ್ಲ. ಅಕ್ರಮವಾಗಿದ್ದೇನೆ. ಬಿಜೆಪಿಯವರು ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಅನ್ಯಾಯ ಮಾಡಿದರು. ಅನ್ಯಾಯ ಮಾಡೋದರಲ್ಲಿ ಬಿಜೆಪಿಯವರು ನಿಸ್ಸೀಮರು. ಮೋಸ ಮಾಡುವುದರಲ್ಲಿ ಅವರು ನಂಬರ್ ಒನ್ ಎಂದು ಆರೋಪಗಳ ಸುರಿಮಳೆಗೈದರು.
ಬಿಜೆಪಿಯ ಸಹವಾಸ ನನಗೆ ಸಾಕು. ಎಚ್.ವಿಶ್ವನಾಥ್ಗೂ ಅನ್ಯಾಯ ಮಾಡಿದರು. ನನಗೂ ಅನ್ಯಾಯ ಮಾಡಿದರು. ಬಿಜೆಪಿಯನ್ನ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದೇನೆ. ಸಿದ್ದರಾಮಯ್ಯರ ಜತೆ ಮಾತಾಡಿದ್ದೀನಿ. ಡಿ.ಕೆ. ಶಿವಕುಮಾರ್ರ ಜತೆಯೂ ಮಾತಾಡುವೆ. ಬಿಜೆಪಿಯವರು ಯಡಿಯೂರಪ್ಪರನ್ನು ಒಳ್ಳೆತನದಲ್ಲಿ ಮುಗಿಸಿದರು. ಆ ವೇಳೆಯೇ ಬಿಜೆಪಿಗೆ 40 ಸ್ಥಾನ ನಷ್ಟವಾಯ್ತು. ಈಗ ವಿಜಯೇಂದ್ರನನ್ನು ವರುಣಕ್ಕೆ ತರುವ ಮೂಲಕ ಅವರನ್ನು ಮುಗಿಸಲು ಹೊರಟ್ಟಿದ್ದಾರೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಬಿಜೆಪಿಯದು ಎಂದು ಸಂದೇಶ್ ನಾಗರಾಜ್ ಗಂಭೀರ ಆರೋಪ ಮಾಡಿದರು.
ವಿಜಯೇಂದ್ರನನ್ನು ಬಲಿ ಕೊಡಲೆಂದೇ ವರುಣ ಕ್ಷೇತ್ರಕ್ಕೆ ಕರೆ ತರುತ್ತಿದ್ದಾರೆ. ವಿಜಯೇಂದ್ರಗೆ ರಾಜಕೀಯ ಭವಿಷ್ಯ ಚೆನ್ನಾಗಿ ಇರಬೇಕಾದರೆ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಲಿ. ಬಿಜೆಪಿಯಿಂದ 10ಕ್ಕಿಂತ ಹೆಚ್ಚು ಶಾಸಕರು ಕಾಂಗ್ರೆಸ್ಗೆ ಬರುತ್ತಾರೆ ಎಂದು ಹೊಸ ಬಾಂಬ್ ಸಿಡಿಸಿದರು.
*ಪ್ರಧಾನಿ ಮೋದಿ ಹತ್ಯೆ ಮಾಡಿ ಎಂದ ಕಾಂಗ್ರೆಸ್ ನಾಯಕ*
https://pragati.taskdun.com/congress-leader-raja-pateriacontroversial-statementpm-narendra-modifir-file/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ