
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವಾಗಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಚಿತ್ರ ನಿರ್ದೇಶಕ ಪ್ರದೀಪ್ ರಾಜ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಕೇವಲ 46 ವರ್ಷಗಳ ಪ್ರದೀಪ್ ರಾಜ್ ಇಂದು ಮುಂಜಾನೆ 3 ಗಂಟೆಗೆ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಸಹೋದರ ಮಾಹಿತಿ ನೀಡಿದ್ದಾರೆ. ಪ್ರದೀಪ್ ರಾಜ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಮಧ್ಯಾಹ್ನ ಪಾಂಡಿಚೆರಿಯಲ್ಲಿ ನೆರವೇರಲಿದೆ.
ಡಯಾಬಿಟೀಸ್ ನಿಂದ ಹಲವು ವರ್ಷಗಳಿಂದ ಬಳಲುತ್ತಿದ್ದ ಪ್ರದೀಪ್ ರಾಜ್ ಅವರಿಗೆ ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
2011 ತೆರೆ ಕಂಡ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕಿರಾತಕ ಚಿತ್ರವನ್ನು ಪ್ರದೀಪ್ ರಾಜ್ ನಿರ್ದೇಶಿಸಿದ್ದರು. ಕಿರಾತಕ-2ಚಿತ್ರ ಕೂಡ ನಿರ್ದೇಶನ ಮಾಡಿದ್ದ ಪ್ರದೀಪ್ ರಾಜ್, ಸಧ್ಯ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಪ್ರದೀಪ್ ರಾಜ್ ನಿಧನಕ್ಕೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ.
ಮನೆಯಲ್ಲೇ ಬಾರ್ ತೆರೆಯಲು ಸರಕಾರದ ಅನುಮತಿ, ಸೂಪರ್ ಮಾರ್ಕೇಟ್‌ನಲ್ಲೂ ಮದ್ಯ ಮಾರಾಟ