
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಗೆಲವು ಸಾಧಿಸಿದ ಹಿನ್ನಲೆ ಬಳ್ಳಾರಿ ಜಿಲ್ಲೆಯ ಸಂಡೂರು ಮತ ಕ್ಷೇತ್ರದ ಶಾಸಕ ಇ. ತುಕಾರಾಮ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಮಾಜಿ ಸಚಿವ ಹಾಗೂ ಬಿಜೆಪಿಯ ಪರಾಜಿತ ಅಭ್ಯರ್ಥಿ ಬಿ. ಶ್ರೀರಾಮುಲು ವಿರುದ್ಧ ಅವರು ಕಣಕ್ಕಿಳಿದು ಗೆದ್ದಿದ್ದಾರೆ. ಅವರ ವಿರುದ್ಧ 98,992 ಮತಗಳಿಂದ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಗಾಗಿ ಸಂಡೂರು ಕ್ಷೇತ್ರದಿಂದ ಸತತ 4 ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ಇ.ತುಕಾರಾಂ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ ಕಾರಣ ಅವರು ಇದೀಗ ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆ ಅವರು ವಿಧಾನಸಭೆ ಸ್ಪೀಕರ್ ಅನುಮತಿ ಮೇರೆಗೆ ಕಾರ್ಯದರ್ಶಿಯವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಲೋಕಸಭೆ ಚುನಾವಣೆಯಲ್ಲಿ ತುಕಾರಾಮ್ 7,30,845 ಮತಗಳನ್ನು ಪಡೆದಿದ್ದರೆ, ಶ್ರೀರಾಮುಲಗೆ 6,31,853 ವೋಟ್ ಗಳನ್ನು ಪಡೆದು ಸೋತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ