Belagavi NewsBelgaum NewsKannada NewsKarnataka News

*ಕೃಷ್ಣಾ, ಪಂಚಗಂಗಾ ನದಿ ಪ್ರವಾಹಕ್ಕೆ ಸಂಗಮೇಶ್ವರ ಮಂದಿರ ಮುಳುಗಡೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಗಡಿಭಾಗಕ್ಕೆ ಹೊಂದಿಕೊಂಡಿರುವ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಮುಳಗುವ ಹಂತಕ್ಕೆ ತಲುಪಿದೆ.

ಕೃಷ್ಣಾ ಮತ್ತು ಪಂಚಗಂಗಾ ನದಿಗಳ ನೀರಿನ ಮಟ್ಟದಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಏರಿಕೆಯಾಗಿದೆ. ನದಿಗಳ ನೀರಿನ ಮಟ್ಟ ಬರೋಬ್ಬರಿ 10 ಅಡಿಗಳಷ್ಟು ಹೆಚ್ಚಾಗಿದ್ದು, ಪ್ರವಾಹದ ನೀರು ಇಲ್ಲಿನ ಪ್ರಸಿದ್ಧ ದತ್ತ ಮಂದಿರದ ಸಮೀಪಕ್ಕೆ ಬಂದು ತಲುಪಿದೆ.

ನದಿಯ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ದತ್ತ ದೇವಸ್ಥಾನದ ಆಡಳಿತ ಮಂಡಳಿ ಹೈ ಅಲರ್ಟ್ ಘೋಷಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನದಿ ದಡದಲ್ಲಿರುವ ದೇವಸ್ಥಾನದ ಸಾಹಿತ್ಯ ಹಾಗೂ ಅಗತ್ಯ ವಸ್ತುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. 

ಇದೇ ವೇಳೆ ಕೃಷ್ಣಾ ಮತ್ತು ಪಂಚಗಂಗಾ ನದಿಗಳ ಸಂಗಮದಲ್ಲಿರುವ ಪ್ರಸಿದ್ಧ ಸಂಗಮೇಶ್ವರ ದೇವಾಲಯವು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿದ್ದು, ಭಕ್ತರು ಹಾಗೂ ನದಿ ಪಾತ್ರದ ಜನರಲ್ಲಿ ಆತಂಕ ಮೂಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button