Belagavi NewsBelgaum NewsEducationKannada NewsKarnataka News
*ಪ್ರವೇಶ ಶುಲ್ಕದಲ್ಲಿ ವಿನಾಯಿತಿ ಘೋಷಿಸಿದ ಸಂಗೊಳ್ಳಿ ರಾಯಣ್ಣ ಕಾಲೇಜು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2026-27 ನೇ ಶೈಕ್ಷಣಿಕ ವರ್ಷಕ್ಕೆ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಸ್ನಾತಕ ಪದವಿ ಕೋರ್ಸುಗಳಿಗೆ ಪ್ರವೇಶ ಪಡೆಯುವ ತೃತೀಯ ಲಿಂಗಿ ವಿದ್ಯಾರ್ಥಿಗಳು, ದೇವದಾಸಿಯ ಮಕ್ಕಳಿಗೆ ಹಾಗೂ HIV ಸೋಂಕಿತ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕದಲ್ಲಿ ವಿಶೇಷ ವಿನಾಯತಿ ನೀಡಲಾಗಿದೆ.
2026-27 ನೇ ಶೈಕ್ಷಣಿಕ ವರ್ಷದಲ್ಲಿ ಮಹಾವಿದ್ಯಾಲಯಗಳಿಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅರ್ಹ ವಿದ್ಯಾರ್ಥಿಗಳಿಗೆ ಸರ್ಕಾರಕ್ಕೆ ಪಾವತಿಸಬೇಕಾದ ಕೆಲವು ನಿಗದಿತ ಶುಲ್ಕಗಳು ಹಾಗೂ ಅತ್ಯಲ್ಪ ಇತರೆ ಶುಲ್ಕಗಳನ್ನು ಮಾತ್ರ ಭರಿಸಿಕೊಂಡು ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



