Belagavi NewsBelgaum NewsKannada NewsKarnataka NewsLatestUncategorized

ಸಂಗೊಳ್ಳಿ ರಾಯಣ್ಣ ದೇಶ ರಕ್ಷಣೆ ಹಾಗೂ ಸ್ವಾಭಿಮಾನಕ್ಕೆ ಹೆಸರುವಾಸಿ – ಸತೀಶ್ ಜಾರಕಿಹೊಳಿ

ದೇಶ ರಕ್ಷಣೆಗೆ ರಾಯಣ್ಣ ಕೊಡುಗೆ ಅಪಾರ : ಸಚಿವ ಸತೀಶ್ ಜಾರಕಿಹೊಳಿ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಕಾಲೇಜಿನಲ್ಲಿ ಅನಾವರಣ ಗೊಳಿಸಿದ್ದು, ಸಂತಸ ತಂದಿದೆ. ಸಂಗೊಳ್ಳಿ ರಾಯಣ್ಣ ದೇಶ ರಕ್ಷಣೆ ಹಾಗೂ ಸ್ವಾಭಿಮಾನಕ್ಕೆ ಹೆಸರುವಾಸಿಯಾದ ಮಹಾನ್ ನಾಯಕ, ಅವರ ಕೊಡುಗೆ ಅಪಾರ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಲಯ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಮ ದರ್ಜೆ ಘಟಕ ಮಹಾವಿದ್ಯಾಲಯ ಬೆಳಗಾವಿ ಸಂಯುಕ್ತಾಶ್ರಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಆವರಣದಲ್ಲಿ ಶುಕ್ರವಾರ (ಜೂ.30) ನಡೆದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನಾವರಣ ಗೊಳಿಸುವುದರ ಮುಖ್ಯ ಉದ್ದೇಶ ರಾಯಣ್ಣನ ಜೀವನ ಚರಿತ್ರೆ, ಹೋರಾಟ, ಸ್ವಾಭಿಮಾನ ನಡೆದುಬಂದ ದಾರಿ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ ಎಂಬ ಉದ್ದೇಶದಿಂದ ಪ್ರತಿಮೆಯನ್ನು ಕಾಲೇಜಿನ ಆವರಣಗೊಳಿಸಲಾಗಿದೆ.

ಈ ದೇಶದ ಇತಿಹಾಸದಲ್ಲಿ ಇಂತಹ ಅನೇಕ ಮಹಾನ್ ನಾಯಕರ ಜೀವನ ಚರಿತ್ರೆಗಳು ಪ್ರೇರಣೆಯಾಗಿವೆ.

ಯಾವುದೇ ಸೈನ್ಯದ ಬೆಂಬಲವಿಲ್ಲದೆ ಬ್ರಿಟಿಷರ ವಿರುದ್ಧ ಹೋರಾಡಿ ದೇಶದ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿ ಚರಿತ್ರೆಯಲ್ಲಿ ಅಜರಾಮರವಾಗಿದ್ದಾರೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.

ರಾಯಣ್ಣನ ಹೆಸರು ಶಾಶ್ವತ:

ಕಿತ್ತೂರು ರಾಣಿ ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಇಂತಹ ಮಹಾನ್ ವ್ಯಕ್ತಿಗಳ ತ್ಯಾಗ ಬಲಿದಾನಗಳ ಫಲವೇ ಇವತ್ತಿನ ಸಮಾಜದಲ್ಲಿ ಎಲ್ಲರೂ ನೆಮ್ಮದಿಯಿಂದಿರಲು ಕಾರಣ. ಸೂರ್ಯ ಚಂದ್ರ, ಭೂಮಿ ಇರೋವರೆಗು ಇವರ ಹೆಸರು ಶಾಶ್ವತ ಎಂದು ಉನ್ನತ ಶಿಕ್ಷಣ ಸಚಿವರಾದ ಎಂ.ಸಿ ಸುಧಾಕರ ಅವರು ತಿಳಿಸಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಿದ್ಯಾರ್ಥಿಗಳ ಪ್ರಗತಿಗೆ, ಶೈಕ್ಷಣಿಕ ಹಿತಕ್ಕೆ ಮೊದಲ ಆದ್ಯತೆಯನ್ನು ನೀಡಿ, ಸಮಾಜದಲ್ಲಿ ಯುವಕ ಯುವತಿಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದರು.

ರಾಜ್ಯದ ಇತಿಹಾಸದಲ್ಲಿಯೇ ಕಿತ್ತೂರ ಸಂಸ್ಥಾನದ ಚರಿತ್ರೆ ಚಿರಪರಿಚಿತ. ರಾಯಣ್ಣ ತ್ಯಾಗ ಬಲಿದಾನವನ್ನು ಅರಿತು ಅವರ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಎಲ್ಲರೂ ಶ್ರಮಿಸಬೇಕು ಎಂದು ಸಚಿವ ಎಂ.ಸಿ ಸುಧಾಕರ ಹೇಳಿದರು

ಶಿಕ್ಷಣ, ಆರೋಗ್ಯಕ್ಕೆ ಪ್ರಾಮುಖ್ಯತೆ:

ಜಿಲ್ಲೆಯಲ್ಲಿ ಈಗಾಗಲೇ ಗುಣಮಟ್ಟದ ಶಿಕ್ಷಣ, ವೈದ್ಯಕೀಯ ಸೇವೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಸಮಾಜದಲ್ಲಿ ಪ್ರಗತಿಪರ ಬದಲಾವಣೆಯ ಅವಶ್ಯಕತೆಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಅನೇಕ ಸುಧಾರಣೆಗಳಾಗಳಿವೆ ಎಂದು ವಿಧಾನಪರಿಷತ್ತಿನ ಸದಸ್ಯರಾದ ಎಚ್ ವಿಶ್ವನಾಥ್ ಅವರು ಹೇಳಿದರು.

ಸ್ವಾತಂತ್ರ್ಯ ಹೋರಾಟಕ್ಕಾಗಿ ರಾಣಿ ಚೆನ್ನಮ್ಮನ ಬಂಟನಾಗಿ ಸಂಗೊಳ್ಳಿ ರಾಯಣ್ಣ ಮಾಡಿದಂತಹ ಹೋರಾಟ ಶ್ಲಾಘನೀಯ. ಆಯುಧಗಳು ಇರದಂತಹ ಸಂದರ್ಭದಲ್ಲಿ ಗೆರೀಲಾ ಯುದ್ಧ ತಂತ್ರದ ಮೂಲಕ ಬ್ರಿಟಿಷರನ್ನು ಎದುರಿಸಿದ ಕೀರ್ತಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಿಗೆ ಸಲ್ಲುತ್ತದೆ ಎಂದು ಮಾಜಿ ಸಚಿವರಾದ ಎಚ್.ಎಂ ರೇವಣ್ಣ ಅವರು ಹೇಳಿದರು.

ಸಂಗೊಳ್ಳಿ ರಾಯಣ್ಣನ ಹೆಸರು ಕೇವಲ ವ್ಯಕ್ತಿಯ ಹೆಸರಲ್ಲ ದೇಶದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ದೇಶ ಭಕ್ತ. ದೇಶದಿಂದ ಬ್ರಿಟಿಷ ಆಡಳಿತ ತಪ್ಪಿಸುವ ನಿಟ್ಟಿನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ಕಿತ್ತೂರ ರಾಣಿ ಚೆನ್ನಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯರಾದ ಎಂ. ನಾಗರಾಜು ಅವರು ಹೇಳಿದರು.

ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕುಲಪತಿ ರಾಮಚಂದ್ರಗೌಡ ಅವರು ವಿವಿಧ ಹೊಸ ಕೋರ್ಸುಗಳನ್ನು ವಿಶ್ವವಿದ್ಯಾಲಯದಲ್ಲಿ ಅಳವಡಿಸಿದ್ದಾರೆ ಎಂದು ಹಿರಿಯ ಸಾಹಿತಿ ಡಾ.ಸರಜೂ ಕಾಟ್ಕರ್ ಅವರು ಹೇಳಿದರು.

ಬೆಳಗಾವಿ ಉತ್ತರ ಶಾಸಕರಾದ ಆಸೀಫ್ (ರಾಜು) ಸೇ‌ಠ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ರಾಮಚಂದ್ರ ಗೌಡ, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಬಿ. ಕೆ. ರವಿ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕುಲಸಚಿವರದಾ ರಾಜಶ್ರೀ ಜೈನಾಪೂರ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಹಣಕಾಸು ಅಧಿಕಾರಿಗಳಾದ ಎಸ್. ಬಿ. ಆಕಾಶ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಕುಲಸಚಿವರಾದ (ಮೌಲ್ಯಮಾಪನ) . ಶಿವಾನಂದ ಗೊರನಾಳೆ, ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಮಹಾವಿದ್ಯಾಲಯ ಪ್ರಚಾರರು ಡಾ. ಶಂಕರ ಎಸ್. ತೆರೆದಾಳ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಬೋಧಕ ಭೋದಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button