Karnataka NewsNational

*ಕಂಟ್ರೋಲರ್ ಹಾಗೂ ಆಡಿಟರ್ ಜನರಲ್ ಆಗಿ ಅಧಿಕಾರ ವಹಿಸಿಕೊಂಡ ಸಂಜಯ್ ಮೂರ್ತಿ*

ಪ್ರಗತಿವಾಹಿನಿ ಸುದ್ದಿ : ಭಾರತದ ನೂತನ ಕಂಟ್ರೋಲರ್ ಹಾಗೂ ಆಡಿಟರ್ ಜನರಲ್ ಆಗಿ ಹಿರಿಯ IAS ಅಧಿಕಾರಿ ಸಂಜಯ್ ಮೂರ್ತಿ ಅಧಿಕಾರ ವಹಿಸಿಕೊಂಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಆಗಸ್ಟ್ 2020 ರಲ್ಲಿ ಸಿಎಜಿ ಆಗಿ ನೇಮಕಗೊಂಡ ಗಿರೀಶ್ ಚಂದ್ರ ಮುರ್ಮು ಅವರ ಅಧಿಕಾರ ಡಿಸೆಂಬರ್ 21, 2024 ರಂದು ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸಂಜಯ್ ಮೂರ್ತಿ ಅವರು ಅಧಿಕಾರ ವಹಿಸಿಕೊಂಡರು. 

ಸಂಜಯ್ ಮೂರ್ತಿ ಅವರು 1989- ಬ್ಯಾಚ್ ಹಿಮಾಚಲ ಪ್ರದೇಶ ಕೇಡರ್ IAS ಅಧಿಕಾರಿಯಾಗಿದ್ದು ಪ್ರಸ್ತುತ ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button