ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅವಧಿ ಮೀರಿದ ಇಂಜಕ್ಷನ್ ನೀಡಿ ಮೂರು ವರ್ಷದ ಬಾಲಕಿ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರ ಸ್ಥಿತಿಗೆ ಕಾರಣವಾಗಿದ್ದ ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಬೇಜವಾಬ್ದಾರಿಗೆ ಮಗುವಿನ ಸ್ಥಿತಿ ಗಂಭೀರವಾಗಿದೆ. ಮೂರು ವರ್ಷದ ಮಗು ಯಾದ್ವಿ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಪೋಷಕರು ಮಗುವನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಮಗು ತೀವ್ರ ಸುಸ್ತಿನಿಂದ ಬಳಲುತ್ತಿದೆ ಎಂದು ಇಂಜಕ್ಷನ್ ಹಾಗೂ ಡ್ರಿಪ್ ಹಾಕಿದ್ದರು. ಕೆಲವೇ ಸಮಯದಲ್ಲಿ ಮಗುವಿನ ತುಟಿ ಊದಿಕೊಂಡು ರಕ್ತಬರಲಾರಂಭಿಸಿತ್ತು. ಪೋಷಕರು ಡ್ರಿಪ್ ಹಾಗೂ ಇಂಜಕ್ಷನ್ ಪರಿಶೀಲಿಸಿದಾಗ ಅದು ಅವಧಿ ಮೀರಿರುವುದು ಗೊತ್ತಾಗಿದೆ.
ವೈದ್ಯರನ್ನು ಹಾಗೂ ಸಿಬ್ಬಂದಿಗಳನ್ನು ಪ್ರಶ್ನೆ ಮಾಡಿದ್ದಕ್ಕೆ ಸಮರ್ಥಿಸಿಕೊಂಡಿದ್ದಾರೆ. ತಕ್ಷಣ ಮಗುವನ್ನು ಬೇರೊಂದು ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದಾರೆ. ಸಂಜೀವಿನಿ ಆಸ್ಪತ್ರೆಯ ವಿರುದ್ಧ ಮಗುವಿನ ಪೋಷಕರು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮಹಾಲಕ್ಷ್ಮೀ ಠಾಣೆ ಪೊಲೀಸರು ಸಂಜೀವಿನಿ ಆಸ್ಪತ್ರೆ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ