ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಭಾಷೆ ಸಂಸ್ಕೃತ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಭಾರತದ ಸಂಸ್ಕೃತಿ ಸಂಸ್ಕೃತ ಭಾಷೆಯಲ್ಲಿದೆ. ಸಂಸ್ಕೃತ ಭಾಷೆ ಭಾರತದ ಮೂಲ ಆಧಾರ ಸ್ಥಂಭ ಇಡೀ ಪ್ರಪಂಚವೇ ಸಂಸ್ಕೃತ ಭಾಷೆಯನ್ನು ಗೌರವಿಸುತ್ತದೆ. ಸಂಸ್ಕೃತ ಸಂಸ್ಕೃತಿಯನ್ನು ಉಳಿಸುವಲ್ಲಿ ಮಂಚೂಣಿಯಲ್ಲಿದೆ. ವೇಧ, ಆಗಮನ, ಉಪನಿಷತ್ ಇವುಗಳು ಸಂಸ್ಕೃತ ಭಾಷೆಯಲ್ಲಿವೆ.
ಸಂಸ್ಕೃತವನ್ನು ಎಲ್ಲರೂ ಮಾತನಾಡುರುವುದರಿಂದ ನಮ್ಮ ಸಂಸ್ಕೃತಿಯನ್ನು ಎತ್ತಿ ಹಿಡಿದಂತಾಗುತ್ತದೆ ಎಂದು ಹುಕ್ಕೇರಿ ಹಿರೇಮಠದ ಗುರುಕುಲದ ಮುಖ್ಯಸ್ಥ ವಿದ್ವಾನ ಸಂಪತಕುಮಾರ ಶಾಸ್ತ್ರೀ ಹೇಳಿದರು.
ಗುರುವಾರ ಹುಕ್ಕೇರಿ ಹಿರೇಮಠದ ಗುರುಕುಲದಲ್ಲಿ ಸಂಸ್ಕೃತ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಕ್ಕೇರಿ ಹಿರೇಮಠದ ವತಿಯಿಂದ ನಾವು ಹಳ್ಳಿ ಮತ್ತು ಪಟ್ಟಣದಲ್ಲಿ ಸಂಸ್ಕೃತ ಕಲಿಸಲು ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾರ್ಗದರ್ಶನ ಮಾಡಿದ್ದಾರೆ. ಭಾರತದ ಪ್ರಾಚೀನ ಭಾಷೆಗಳಲ್ಲೊಂದಾದ ಸಂಸ್ಕೃತ ಕರ್ನಾಟಕದಲ್ಲಿ ಬಹು ಹಿಂದಿನಿಂದಲೂ ಪ್ರಚಾರದಲ್ಲಿದ್ದು ದೀರ್ಘವಾದ ಇತಿಹಾಸವನ್ನು ಹೊಂದಿದೆ. ಪ್ರತಿಷ್ಠಾನ ನಗರದಲ್ಲಿದ್ದ ಶಾತವಾಹನ ದೊರೆಗೆ ಸಂಬಂಧಿಸಿದ ‘ಮೋದಕಂ ತಾಡಯ’ದ ಕಥೆ ಬಹುಶಃ ದಕ್ಷಿಣ ಭಾರತದಲ್ಲಿ ಸಂಸ್ಕೃತದ ಹರಡುವಿಕೆಯ ಪ್ರಾರಂಭವನ್ನು ಸೂಚಿಸುತ್ತದೆ. ಇದನ್ನು ಎಲ್ಲರೂ ಕಲಿಯುವುದು ಅತ್ಯಗತ್ಯವಾಗಿದೆ ಎಂದರು.
ಕಬ್ಬೂರು ಗೌರಿಶಂಕರ ಮಠದ ರೇವಣಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ಸಂಸ್ಕೃತ ಕಾಲೇಜನ್ನು ತಂದಿರುವ ಮಠ ಹುಕ್ಕೇರಿ ಹಿರೇಮಠ. ಈ ಪಾಠ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ರಾಜ್ಯ, ಹೊರ ರಾಜ್ಯದಲ್ಲಿ ಸಂಸ್ಕೃತ ಉಳಿಸಿ ಬೆಳೆಸುವಲ್ಲಿ ಮಂಚೂಣಿಯಲ್ಲಿ ನಿಂತಿದ್ದಾರೆ. ನಾವೆಲ್ಲರೂ ಸಂಸ್ಕೃತ ಭಾಷೆಯನ್ನು ಗೌರವಿಸುವ ಅವಶ್ಯಕತೆ ಇದೆ ಎಂದರು.
ಸಹ ಶಿಕ್ಷಕ ನಿಂಗಯ್ಯ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಹುಕ್ಕೇರಿ ಹಿರೇಮಠದ ಗುರುಕುಲದ ಸಾಧಕರು ಸಂಸ್ಕೃತ ಭಾಷೆಯಲ್ಲೇ ಸಂಭಾಷಣೆ ಮಾಡುವುದರೊಂದಿಗೆ ಸಂಸ್ಕೃತ ಸಪ್ತಾಹಕ್ಕೆ ಮೆರಗು ತಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ