Belagavi NewsBelgaum NewsEducationKarnataka News

*ಸಂತೋಷ ನಾಯಿಕ ಅವರಿಗೆ ಡಾಕ್ಟರೇಟ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪೂರ ಗ್ರಾಮದ ಸಂತೋಷ ನಾಯಿಕ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿದೆ.

ಸಂತೋಷ ನಾಯಿಕ ಅವರು ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಗೆ ಸಲ್ಲಿಸಿದ ‘ಉತ್ತರ ಕನ್ನಡ ಲೇಖಕಿಯರ ಕಥಾ ಸಾಹಿತ್ಯ : ಸ್ತ್ರೀ ಸಂವೇದನೆ’ ಎಂಬ ಮಹಾಪ್ರಬಂಧಕ್ಕೆ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ. ಇವರಿಗೆ
ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ಶೋಭಾ ನಾಯಕ ಅವರು ಮಾರ್ಗದರ್ಶಕರಾಗಿದ್ದರು.


ಸಂತೋಷ ನಾಯಿಕ ಅವರು ಬಾಗಲಕೋಟೆ ಜಿಲ್ಲೆಯ ಹುನಗುಂದದ ಎಸ್ ಆರ್ ವಸ್ತ್ರದ ಕಲಾ , ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ವಿಷಯದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಸಾಹಿತ್ಯದಲ್ಲಿ ಪ್ರತಿಭಾವಂತ ಕವಿಯೆಂದು ಗುರುತಿಸಿಕೊಂಡಿರುವ ಇವರು ಎರಡು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

Home add -Advt

Related Articles

Back to top button