ಪ್ರಗತಿವಾಹಿನಿ ಸುದ್ದಿ; ಮುಂಬೈ: ಖ್ಯಾತ ಸಂತೂರ್ ವಾದಕ, ಪದ್ಮವಿಭೂಷಣ ಪುರಸ್ಕೃತ, ಪಂಡಿತ್ ಶಿವಕುಮಾರ್ ಶರ್ಮಾ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ತಮ್ಮ 13ನೇ ವರ್ಷಕ್ಕೆ ಸಂತೂರ್ ನುಡಿಸಲು ಆರಂಭಿಸಿದ್ದ ಶಿವಕುಮಾರ್ ಶರ್ಮಾ, 1955ರಲ್ಲಿ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 1956ರಲ್ಲಿ ತೆರೆ ಕಂಡಿದ್ದ ಝನಕ್ ಝನಕ್ ಯಾಲ್ ಬಜೆ ಚಿತ್ರಕ್ಕೆ ಮೊದಲ ಬಾರಿಗೆ ಸಂಗೀತ ಸಂಯೋಜನೆ ಮಾಡಿದ್ದರು. ಬಳಿಕ ಮೊದಲ ಬಾರಿಗೆ ಸೋಲೋ ಆಲ್ಬಂ ಮಾಡಿ ಜನಪ್ರಿಯತೆ ಪಡೆದುಕೊಂಡಿದ್ದರು.
ಸಂಗೀತ ಕ್ಷೇತ್ರಕ್ಕೆ ಇವರು ನೀಡಿದ್ದ ಕೊಡುಗೆ ಪರಿಗಣಿಸಿ ಕೇಂದ್ರ ಸರ್ಕಾರ 1991ರಲ್ಲಿ ಪದ್ಮಶ್ರೀ, 2001ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.
ಕಳೆದ 6 ತಿಂಗಳಿಂದ ಕಿಡ್ನಿ ಸಮಸೆಯಿಂದ ಬಳಲುತ್ತಿದ್ದ ಶಿವಕುಮಾರ್ ಡಯಾಲಿಸಿಸ್ ಪಡೆಯುತ್ತಿದ್ದರು. ಆದರೆ ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಂಡಿತ್ ಶಿವಕುಮಾರ್ ಶರ್ಮಾ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ.
ವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ