
ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳಿಂದ ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಯುವ ನಟ ಸಂತೋಷ್ ಬಾಲರಾಜ್ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನ ಬನಶಂಕರಿಯ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಬಾಲರಾಜ್, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸಂತೋಷ್ ಬಾಲರಾಜ್ ಖ್ಯಾತ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ. ಅವರಿಗೆ 38 ವರ್ಷ ವಯಸ್ಸಾಗಿತ್ತು. ಕೆಲದಿನಗಳಿಂದ ಜಾಂಡಿಸ್ ನಿಂದ ಬಳಲುತ್ತಿದ್ದರು. ತೀವ್ರನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಕರಿಯ-2, ಗಣಗ, ಸತ್ಯಂ, ಕೆಂಪ, ಬರ್ಕ್ಲಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು.