Beereshwara 27
Emergency Service

ಒಡಿಶಾ ರೈಲು ದುರಂತ; ಕನ್ನಡಿಗರು ಸುರಕ್ಷಿತರಾಗಿದ್ದಾರೆ; ಸಚಿವ ಸಂತೋಷ್ ಲಾಡ್ ಮಾಹಿತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ 300ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಮೃತದೇಹಗಳನ್ನು ಪರಿಶೀಲಿಸಿರುವುದಾಗಿ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಮೃತದೇಹಗಳನ್ನು ಪರಿಶೀಲಿಸಿದ್ದೇನೆ. ದುರಂತದಲ್ಲಿ ಸಾವನ್ನಪ್ಪಿದವರಲ್ಲಿ ಯಾರೂ ಕನ್ನಡಿಗರಿಲ್ಲ ಎಂದು ಸಚಿವ ಸಂತೋಷ್ ಲಾಡ್ ಮಾಹಿತಿ ನೀಡಿದ್ದಾರೆ.

ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದ್ನೆ. ಅಲ್ಲದೇ ಎರಡು ಮೂರು ಶವಾಗಾರ, ನಾಲ್ಕು ಆಸ್ಪತ್ರೆಗಳಿಗ್ ಭೇಟಿ ನೀಡಿ ಪರಿಶೀಲಿಸಿದ್ದೇನೆ. 750 ಗಾಯಾಳುಗಳನ್ನು ಮಾತನಾಡಿಸಿದ್ದೇನೆ. ಮೃತರಲ್ಲಾಗಲಿ, ಗಾಯಾಳುಗಳಲ್ಲಾಗಲಿ ಯಾರೂ ಕನ್ನಡಿಗರು ಇಲ್ಲ ಎಂದು ಹೇಳಿದ್ದಾರೆ.

ಯಾರೆಗೆ ತೆರಳಿದ್ದ 110 ಜನ ಕಳಸ ಮೂಲದ ಕನ್ನಡಿಗರು ವಾಪಸ್ ಆಗುತ್ತಿದ್ದಾರೆ. ಪುರಿ ಜಗನ್ನಾಥ ದರ್ಶನಕ್ಕೆ ಬಂದವರಿಗೆ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

https://pragati.taskdun.com/mandyalorrycaraccident4-people-death/

Bottom Ad 1
Bottom Ad 2

You cannot copy content of this page