ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸುದ್ದಿಯಲ್ಲಿದ್ದ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣಗಳನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.
ಮೈಸೂರಿನ ವಿಜಯನಗರ ಠಾಣೆಯಲ್ಲಿ ಸ್ಯಾಂಟ್ರೋ ರವಿ ಎರಡನೇ ಪತ್ನಿ ಸ್ಯಾಂಟ್ರೋ ರವಿ ವಿರುದ್ಧ ಕೇಸ್ ದಾಖಲಿಸಿದ್ದರು. ಇದರ ಬೆನ್ನಲ್ಲೇ ಸ್ಯಾಂಟ್ರೋ ರವಿ ಪ್ರಕರಣಗಳು ಹೊರ ಬಂದಿದ್ದವು, ಕೇಸ್ ದಾಖಲಾಗುತ್ತಿದ್ದಂತೆ ಗುಜರಾತ್ ನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಎರಡು ದಿನಗಳ ಹಿಂದೆ ಮೈಸೂರು ಪೊಲೀಸರು ಬಂಧಿಸಿದ್ದರು. ಸಧ್ಯ ಸ್ಯಾಂಟ್ರೋ ರವಿ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಈ ನಡುವೆ ಸ್ಯಾಂಟ್ರೋ ರವಿ ಕೇಸ್ ನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಪೊಲೀಸರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ನಿರ್ದೇಶನ ನೀಡಿದ್ದಾರೆ. ಇಂದು ಸಂಜೆ ಅಥವಾ ನಾಳೆಯೊಳಗೆ ಸ್ಯಾಂಟ್ರೋ ರವಿ ಕೇಸ್ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆಯಾಗುತ್ತದೆ ಎಂದು ತಿಳಿಸಿದ್ದಾರೆ.
*ಇಂದಿನಿಂದ 2 ದಿನ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ*
https://pragati.taskdun.com/bjp-national-executive-meetingdelhi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ