ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹ ಸಚಿವರ ಮನೆಯಲ್ಲಿ ಸ್ಯಾಂಟ್ರೊ ರವಿ ಹಣ ಎಣಿಸಿರುವ ಫೋಟೋ ವೈರಲ್ ಆಗಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಕುಮಾರಸ್ವಾಮಿ ಹಸಿ ಸುಳ್ಳು ಹೇಳುವ ಮೂಲಕ ಹತಾಶ ಸ್ಥಿತಿಗೆ ತಲುಪಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರಗ ಜ್ಞಾನೇಂದ್ರ, ಕುಮಾರಸ್ವಾಮಿ ನನ್ನ ಮೇಲೆ ಮಾಡಿರುವ ಆರೋಪ ಸಾಬೀತುಪಡಿಸಬೇಕು ಎಂದು ಸವಾಲು ಹಾಕಿದ್ದಾರೆ.
ರವಿ ನನ್ನ ಮನೆಯಲ್ಲಿ ಹಣದ ಗಂಟನ್ನು ಬಿಚ್ಚಿದ್ದಾನೆ ಎಂದು ಆರೋಪಿಸಿದ್ದಾರೆ. ಹೆಚ್ ಡಿ ಕೆ ಸತ್ಯಕ್ಕೆ ಅಪವಾದವಾಗುವಂತಹ ಆರೋಪ ಮಾಡುತ್ತಿದ್ದಾರೆ. ಯಾವ ಕಾರಣಕ್ಕೆ ನನ್ನ ತೇಜೋವಧೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿಲ್ಲ. ಇದರಿಂದ ಕುಮಾರಸ್ವಾಮಿ ಅವರಿಗೆ ಯಾವ ರೀತಿ ಲಾಭವಾಗುತ್ತದೆ ಗೊತ್ತಿಲ್ಲ ಎಂದಿದ್ದಾರೆ.
ಗೃಹ ಸಚಿವನಾದ ನನ್ನನ್ನು ದಿನಕ್ಕೆ ನೂರಾರು ಜನ ಭೇಟಿಯಾಗುತ್ತಾರೆ. ಪ್ರತಿಯೊಬ್ಬರ ಹಿನ್ನೆಲೆಯನ್ನೂ ಸೋಸಿ ನೋಡಲು ಆಗಲ್ಲ. ಸ್ಯಾಂಟ್ರೋ ರವಿ ಹಿನ್ನೆಲೆ ಬಗ್ಗೆ ತನಿಖೆ ನಡೆಸಿ ವಿಚಾರಣೆಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
*ಗೃಹ ಸಚಿವರ ಮನೆಯಲ್ಲಿ ಸ್ಯಾಂಟ್ರೋ ರವಿಯಿಂದ ಕಂತೆ ಕಂತೆ ಹಣ ಎಣಿಕೆ; ಹೊಸ ಬಾಂಬ್ ಸಿಡಿಸಿದ HDK*
https://pragati.taskdun.com/h-d-kumaraswamysantro-raviaraga-jnanendra/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ