Film & Entertainment

*ಯುವ ರಾಜ್ ಕುಮಾರ್ ಪತ್ನಿ ಶ್ರೀದೇವಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸಪ್ತಮಿ ಗೌಡ*

ಪ್ರಗತಿವಾಹಿನಿ ಸುದ್ದಿ: ನಟ ಯುವ ರಾಜ್ ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ವಿರುದ್ಧ ನಟಿ ಸಪ್ತಮಿ ಗೌಡ ಕೋರ್ಟ್ ಮೆಟ್ಟಿಲೇರಿದ್ದಾರೆ.

Home add -Advt

ತನ್ನ ವಿರುದ್ಧ ಮಾನಹಾನಿಕಾರಕ ಹೇಳಿಕೆ ನೀಡಿ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಶ್ರೀದೇವಿ ವಿರುದ್ಧ ಸಪ್ತಮಿ ಗೌಡ ಕೋರ್ಟ್ ನಲ್ಲಿ ದಾವೆ ಹೂಡಿದ್ದಾರೆ.

ಯುವ ರಾಜ್ ಕುಮಾರ್ ಪ್ರಕರಣದಲ್ಲಿ ತಮ್ಮ ಹೆಸರು ತಳುಕು ಹಾಕಲಾಗುತ್ತಿದೆ. ಇಲ್ಲಸಲ್ಲದ ಆರೋಪ ಹೋರಿಸಿ ಚಾರಿತ್ರ್ಯವಧೆ ಮಾಡಲಾಗುತ್ತಿದೆ ಎಂದು ಸಪ್ತಮಿ ಗೌಡ ಆರೋಪಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್, ಮಾನಹಾನಿಕಾರಕ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ಹೊರಡಿಸಿದೆ.

ಅಲ್ಲದೇ ಅರ್ಜಿ ಸಂಬಂಧ ಶ್ರೀದೇವಿ ಭೈರಪ್ಪಗೂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.


Related Articles

Back to top button