ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆಯ ಹಿಂದೆ ಅವರ ಆಪ್ತನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಬೇನಾಮಿ ಆಸ್ತಿ, ಹಣಕಾಸು ವಿವಾದವೇ ಕೊಲೆಗೆ ಕಾರಣವಾಯಿತೇ ಎಂಬ ಅನುಮಾನ ಮೂಡಿದೆ.
ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರೂಜಿ ಆಪ್ತ ಮಹಾಂತೇಶ್ ಶಿರೂರ್ ಹಾಗೂ ಆತನ ಪತ್ನಿ ವನಜಾಕ್ಷಿ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಗೋಕುಲ್ ರೋಡ್ ಠಾಣೆ ಪೊಲೀಸರು ಮಹಾಂತೇಶ್ ಶಿರೂರ್ ಪತ್ನಿ ವನಜಾಕ್ಷಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಚಂದ್ರಶೇಖರ್ ಗುರೂಜಿಯವನ್ನು ಇಂದು ಮಧ್ಯಾಹ್ನ ಹುಬ್ಬಳ್ಳಿಯ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದರು. ಮಹಾಂತೇಶ್ ಶಿರೂರ್ ಹಾಗೂ ಮಂಜುನಾಥ್ ದುಮ್ಮವಾಡ ಎಂಬ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ದುಮ್ಮವಾಡ ನಿವಾಸಿಗಳೆ ಹಂತಕರಿರಬಹುದು ಎಂದು ಪೊಲಿಸರು ಅನುಮಾನ ವ್ಯಕ್ತವಪಡಿಸಿದ್ದಾರೆ.
60 ಬಾರಿ ಚಾಕುವಿನಿಂದ ಇರಿದ ದುಷ್ಕರ್ಮಿಗಳು; ಚಂದ್ರಶೇಖರ್ ಗುರೂಜಿ ಹತ್ಯೆಯ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ