Latest

ಸ್ಥಳೀಯ ಭಾಷೆಗಳಲ್ಲೂ ಬ್ಯಾಂಕಿಂಗ್ ಪರೀಕ್ಷೆ: ಕೇಂದ್ರ ಭರವಸೆ

 

ಪ್ರಗತಿವಾಹಿನಿ ಸುದ್ದಿ, ನವದೆಹಲಿ :

ಸ್ಥಳೀಯ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಇಂದು ಹೇಳಿದರು.

 ಬಜೆಟ್ ಮಂಡನೆಗೂ ಮುನ್ನ  ಅವರು ಗುರುವಾರ ಲೋಕಸಭೆಯ ಮುಂಗಾರು ಅಧಿವೇಶನದಲ್ಲಿ ಆರ್ಥಿಕ ಸಮೀಕ್ಷೆ ವರದಿ ಮಂಡನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮೀಣ ಬ್ಯಾಂಕ್ ಪರೀಕ್ಷೆಯ ವಿಚಾರವನ್ನು ಪ್ರಸ್ತಾಪಿಸಿ, ಜಿಸಿ ಚಂದ್ರಶೇಖರ್ ಸೇರಿದಂತೆ ಕರ್ನಾಟಕದ ಸಂಸದರು ಶೂನ್ಯವೇಳೆಯಲ್ಲಿ ಎತ್ತಿರುವ ಪ್ರಶ್ನೆ ಬಗ್ಗೆ ಸರ್ಕಾರ ಪರಿಗಣಿಸಲಿದೆ. ಕನ್ನಡ ಸೇರಿದಂತೆ 13 ಭಾರತೀಯ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. ಇದರಿಂದಾಗಿ, ಆರ್ಆರ್ ಬಿ ಮತ್ತು ಐಬಿಪಿಎಸ್ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯುವ ಅವಕಾಶ ಸಿಗಲಿದೆ. 

Home add -Advt

ಐಬಿಪಿಎಸ್ ಪರೀಕ್ಷೆ ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಮಾತ್ರ ಬರೆಯಲು ಸಾಧ್ಯವಿದ್ದು, ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಿದರೆ, ಸ್ಥಳೀಯ ಉದ್ಯೋಗ ಆಕಾಂಕ್ಷಿಗಳಿಗೆ ನೆರವಾಗಲಿದೆ ಎಂದು ರಾಜ್ಯಸಭಾ ಸದಸ್ಯ ಕಾಂಗ್ರೆಸ್ ಮುಖಂಡ ಜಿಸಿ ಚಂದ್ರಶೇಖರ್ ಹೇಳಿದರು. 

 

Related Articles

Back to top button