Kannada NewsLatest

ಜಗಕೆ ಅನ್ನವ ನೀಡುವ ರೈತರ ಸಮಗ್ರ ಎಳ್ಗೆಗೆ ಸದಾ ಸಿದ್ದ: ಸಚಿವೆ ಶಶಿಕಲಾ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ನಿಪ್ಪಾಣಿಯಲ್ಲಿ, ಅಜಾತಶತ್ರು, ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ, ಅವರ ಭಾವಚಿತ್ರಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಅಣ್ಣಾಸಾಹೇಬ ಜೊಲ್ಲೆ ಹಾಗೂ ಬಸವಜ್ಯೋತಿ ಯೂಥ್ ಫೌಂಡೇಶನ್ ಅಧ್ಯಕ್ಷ್ಯ ರಾದಬಸವಪ್ರಸಾದ ಅವರು ಪುಷ್ಪನಮನ ಸಲ್ಲಿಸಿದರು.

ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫರೆನ್ಸ್ ಮೂಲಕ ಕಿಸಾನ್ ಸಮ್ಮಾನ್ ಯೋಜನೆ ವತಿಯಿಂದ 9 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 18 ಸಾವಿರ ಕೋಟಿ ರೂ. ಪಾವತಿ ಮಾಡಿರುವ ಕಾರ್ಯಕ್ರಮದ ನೇರಪ್ರಸಾರವನ್ನು ಪಕ್ಷದ ಕಾರ್ಯಕರ್ತರೊಡಗೂಡಿ ವೀಕ್ಷಿಸಿದರು.

ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ಜಗದ ಹಸಿವು ನೀಗಿಸುವ ಅನ್ನದಾತರ ಏಳ್ಗೆಗೆ ಶ್ರಮಿಸುವುದು ನಮ್ಮ ಜವಾಬ್ದಾರಿ. ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಅವರ ಸಂಕಷ್ಟಕ್ಕೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ಈ ಹಿನ್ನಲೆಯಲ್ಲಿ ಇಂದು ಪ್ರಧಾನಿ ಮೋದಿಜಿ ಅವರು, ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದು, ಇದರಿಂದ ಫಲಾನುಭವಿ ರೈತರ ಬಾಳಲ್ಲಿ ಸಮೃದ್ಧಿಯೆಂಬ ನವಚೈತನ್ಯ ಮೂಡಲಿದೆ ಎಂಬ ವಿಶ್ವಾಸವಿದೆ. ದೇಶದ ಬೆನ್ನೆಲುಬಾದ ರೈತರ ಶ್ರೇಯೋಭಿವೃದ್ಧಿಗಾಗಿ ನಮ್ಮ ಶ್ರಮ ಎಂದೆಂದಿಗೂ ಅವಿರತವಾಗಿರುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಸ್ಥಳೀಯ ಮುಖಂಡರು, ನಗರಸಭೆ ಸದಸ್ಯರು, ಮಹಿಳಾ ಮೋರ್ಚಾ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button