Belagavi NewsBelgaum News

*ಬೆಳಗಾವಿಯಲ್ಲಿ ಗುಂಪು ಘರ್ಷಣೆ; ಕಲ್ಲುತೂರಾಟ*

ಪ್ರಗತಿವಾಹಿನಿ ಸುದ್ದಿ: ಗುಂಪು ಘರ್ಷಣೆ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ನಡೆದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

Home add -Advt

ಶಹಾಪುರ ಪ್ರದೇಶದ ಅನವಾಳ ಗಲ್ಲಿಯಲ್ಲಿ ಮಕ್ಕಳ ನಡುವೆ ಕ್ರಿಕೆಟ್ ವಿಚಾರವಾಗಿ ಆರಂಭವಾದ ಜಗಳ ಎರಡು ಗುಂಪುಗಳ ನಡುವೆ ಗಲಾಟೆಗೆ ಕಾರಣವಾಗಿದ್ದು, ಕಲ್ಲು ತೂರಾಟ ನಡೆದಿದೆ.

ಘತನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಗರ ಪೊಲೀಸ್ ಆಯುಕ್ತರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲಿಸರನ್ನು ನಿಯೋಜಿಲಸಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ ಎಂದು ತಿಳಿದುಬಂದಿದೆ.

ಗಲ್ಲಿ ಕ್ರಿಕೆಟ್ ಜಗಳ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು, ಕಲ್ಲು ತೂರಾಟಕ್ಕೆ ಕಾರಣ ಎನ್ನಲಾಗಿದೆ.


Related Articles

Back to top button