Kannada NewsKarnataka NewsLatest

ಸತೀಶ್‌ ಜಾರಕಿಹೊಳಿಯದ್ದು 25% ರಾಜಕೀಯ, 75% ಸಮಾಜ ಸೇವೆ: ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ ಜಿಲ್ಲಾ ಪುರುಷ-ಮಹಿಳಾ ಹೊನಲು ಬೆಳಕಿನ ಕಬಡ್ಡಿ ಚಾಂಪಿಯನ್‌ಶಿಪ್‌ 2022 ಉದ್ಘಾಟನಾ ಸಮಾರಂಭ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 25% ರಾಜಕೀಯ ಮಾಡಿ, 75% ಸಮಾಜ ಸೇವೆ ಮಾಡುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಕಾರ್ಯ ಎಲ್ಲರಿಗೂ ಮಾದರಿ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ತಾಲ್ಲೂಕಿನ ಮುಚ್ಚಂಡಿ ಗ್ರಾಮದಲ್ಲಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಬೆಳಗಾವಿ ಜಿಲ್ಲಾ ಪುರುಷ ಹಾಗೂ ಮಹಿಳಾ ಹೊನಲು ಬೆಳಕಿನ ಕಬಡ್ಡಿ ಚಾಂಪಿಯನ್‌ಶಿಪ್‌ 2022 ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಾಳಾಗಿ ಅವರು ಮಾತನಾಡಿದರು.
ಶಾಸಕರಾದ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಮೊದಲಿನಿಂದಲೂ ಶಿಕ್ಷಣ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೆ ಆದ್ಯತೆ ನೀಡುತ್ತಾ ಬಂದಿದ್ದಾರೆ. ಅವರ ಮಗನಾದ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಸಂತಸದ ವಿಚಾರ, ಕಾರಣ ರಾಹುಲ್ ಅವರು ಜಿಲ್ಲೆಯ ಕ್ರೀಡಾ ಕ್ಷೇತ್ರದ ರೂಪರೇಷೆಗಳನ್ನು ಬದಲಾವಣೆ ತರುತ್ತಾರೆ ಎಂಬ ಭರವಸೆ ಇದೆ ಎಂದು ತಿಳಿಸಿದರು.
ಯುವ ನಾಯಕ ರಾಹುಲ್‌ ಜಾರಕಿಹೊಳಿ ಮಾತನಾಡಿ, ಇಂದು ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ ನೀಡಬೇಕಾಗಿದು, ಗ್ರಾಮೀಣ ಭಾಗದ ಯುವಕರು, ಯುವತಿಯರು ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಲು ನಾವು ಅವಕಾಶಗಳನ್ನು ಮಾಡುತ್ತಿದ್ದು, ಮುಂದೆಯೂ ಕೂಡ ಎಲ್ಲ ರೀತಿಯ ಸಹಾಯ, ಸಹಕಾರವನ್ನು ಬೆಳಗಾವಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈಗಾಗಲೇ ಸತೀಶ್ ಜಾರಕಿಹೊಳಿ ಫೌಂಡೇಶನ್ ನಿಂದ ಗ್ರಾಮೀಣ ಪ್ರತಿಭೆಗಳನ್ನು ಬೆಳೆಸಲು ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮುಂದೆ ಜಿಲ್ಲೆಯಲ್ಲಿ ಕಬಡ್ಡಿ ಪಂದ್ಯ ಹಮ್ಮಿಕೊಳ್ಳುವವರಿಗೆ ಫೌಂಡೇಶನ್ ವತಿಯಿಂದ ಉಚಿತ ಕಬಡ್ಡಿ ಮ್ಯಾಟ್‌ ವಿತರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವೀರಕುಮಾರ ಪಾಟೀಲ್‌, ಮಾಜಿ ಶಾಸಕರಾದ ಶ್ಯಾಮ ಘಾಟಗೆ, ರಮೇಶ ಕುಡಚಿ, ಕಾಂಗ್ರೆಸ್‌ ಮುಖಂಡರಾದ ಮಹಾವೀರ ಮೋಹಿತೆ, ಮಹೇಶ ತಮ್ಮಣ್ಣವರ್‌, ಪಂಚನಗೌಡ ದ್ಯಾಮನಗೌಡರ, ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಗ್ರಾಮೀಣ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ಉಪ ನಿರ್ದೇಶಕರಾದ ಬಸವರಾಜ ಮಿಲ್ಲಾನಟ್ಟಿ, ಜಿಲ್ಲಾ ಅಮೆಚೂರ ಕಬಡ್ಡಿ ಅಸೋಸಿಯೆಷನ್‌ ಬೆಳಗಾವಿ ಸಂಸ್ಥಾಪಕ ಕಾರ್ಯದರ್ಶಿಗಳಾದ ಬಾಳೇಶ ಬರಗಾಲಿ, ಬಾಗಲಕೋಟೆ ಜಿಲ್ಲಾ ಅಮೆಚೂರ ಕಬಡ್ಡಿ ಅಸೋಸಿಯೆಷನ್‌ ಅಧ್ಯಕ್ಷರಾದ ನಂದಕುಮಾರ ಪಾಟೀಲ್‌ ಸೇರಿದಂತೆ ಇತರರು ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button