Karnataka NewsPolitics

*ವಿಧಾನ ಪರಿಷತ್ತಿಗೆ ನಾಲ್ವರು ನಾಮನಿರ್ದೇಶಿತರನ್ನು ಘೋಷಿಸಿದ ಕಾಂಗ್ರೆಸ್‌*

ಪ್ರಗತಿವಾಹಿನಿ ಸುದ್ದಿ : ರಾಜ್ಯ ವಿಧಾನ ಪರಿಷತ್ತಿಗೆ ಪಕ್ಷದ ನಾಲ್ವರು ನಾಮನಿರ್ದೇಶಿತರನ್ನು ಕಾಂಗ್ರೆಸ್‌ ಘೋಷಿಸಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು, ಎನ್‌ಆರ್‌ಐ ಫೋರಂ ಉಪಾಧ್ಯಕ್ಷೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ದಲಿತ ಮುಖಂಡ ಸಾಗರ್ ಹೆಸರುಗಳನ್ನು ಪಕ್ಷದ ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ಹೇಳಲಾಗುತ್ತಿದೆ.

ರಾಜ್ಯಪಾಲರ ಒಪ್ಪಿಗೆ ಪಡೆದ ನಂತರ ನಾಲ್ವರೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನದೊಂದಿಗೆ 75 ಸದಸ್ಯ ಬಲದ ಸದನದಲ್ಲಿ ಕಾಂಗ್ರೆಸ್ 37 ಸದಸ್ಯರನ್ನು ಹೊಂದಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button