Kannada NewsKarnataka NewsLatest

ಬೆಳಗಾವಿ ದಕ್ಷಿಣದಲ್ಲಿ ಮತ್ತೆ ಸತೀಶ್ ಜಾರಕಿಹೊಳಿ ಸಂಚಾರ: ಕ್ಷೇತ್ರದಲ್ಲಿ ಕುತೂಹಲ

ವಡಗಾಂವ ನೇಕಾರ ಸಮಾಜದ  ಮೂವರು ಆತ್ಮಹತ್ಯೆ: ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಳಗಾವಿ ದಕ್ಷಿಣ ಮತಕೇತ್ರದ ಜನರ ಸಮಸ್ಯೆ ಆಲಿಸಿದ ಸತೀಶ ಜಾರಕಿಹೊಳಿ,   ಮೃತರ ಕುಟುಂಬಕ್ಕೆ ಪರಿಹಾರ ಕಲ್ಪಿಸುವುದಾಗಿ ಭರವಸೆ

ಪ್ರಗತಿವಾಹಿನಿ ಸುದ್ದಿ,  ಬೆಳಗಾವಿ:  ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಿ, ಅಲ್ಲಿನ ಜನರ ಅಹವಾಲು ಆಲಿಸುವ ಮೂಲಕ ಹೊಸ ಸಂಚಲನ ಮೂಡಿಸಿದ್ದಾರೆ.
ಕೆಲ ದಿನಗಳ ಹಿಂದೆ ದಕ್ಷಿಣ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆ ಆಲಿಸಿದ್ದ ಅವರು, ಭಾನುವಾರ ಪುನಃ ಕ್ಷೇತ್ರದಲ್ಲಿ ಸಂಚರಿಸಿ ಅಹವಾಲು ಆಲಿಸಿದರು. ಸತೀಶ್ ಜಾರಕಿಹೊಳಿ ಅವರ ಈ ನಡೆ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
ಸಾಲದ ಬಾದೆ ತಾಳಲಾದರೆ ಆತ್ಮಹತ್ಯೆಗೆ ಶರಣಾದ  ದಕ್ಷಿಣ ಮತಕ್ಷೇತ್ರದ ವಡಗಾಂವ ನೇಕಾರ  ಸಮಾಜ  ಮೂವರು ಮೃತ ಕುಟುಂಬಸ್ಥರ ಮನೆಗೆ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ ನೀಡಿ, ನೊಂದ ಕುಟುಂಬಕ್ಕೆ ಸ್ವಾಂತನ ಹೇಳಿದರು.
ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದ ಬೆಳಗಾವಿ ದಕ್ಷಿಣ ಮತಕೇತ್ರ ವ್ಯಾಪ್ತಿಯ ವಡಗಾಂವ ನೇಕಾರ ಸಮಾಜದ  ಪಾಂಡು ಉಪರಿ , ಗಣಪತಿ ಬುಚಡಿ  ಸಾವನಪ್ಪಿಸಿದ್ದರು . ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ ನೀಡಿ, ಧೈರ್ಯದಿಂದ ಜೀವನ ಸಾಗಿಸಬೇಕು. ಕುಟುಂಬವನ್ನು ಚೆನ್ನಾಗಿ ನೋಡಿಕೊಂಡು ಸಾಗಬೇಕು. ನಿಮಗೆಲ್ಲ ಸಹಕಾರ ನೀಡುವುದಾಗಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
 ಕುಟುಂಬಕ್ಕೆ  ಸರ್ಕಾರದಿಂದ ಪರಿಹಾರ ಹಾಗೂ ಸೌಲಭ್ಯ ಕಲ್ಪಿಸಿ ಕೊಡುವುದಾಗಿ   ಭರವಸೆ ನೀಡಿದ್ದಾರೆ.

ನೊಂದ ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸತೀಶ ಜಾರಕಿಹೊಳಿ:

ಈ ವೇಳೆ ಮೃತನ ಪತ್ನಿ ಮಾತನಾಡಿ,  ನಮ್ಮ ಕಷ್ಟಗಳಿಗೆ ಯಾರೂ ಸ್ಪಂದಿಸುವುದಿಲ್ಲ. ಇಲ್ಲಿವರೆಗೂ ಪರಿಹಾರ ನೀಡಿಲ್ಲವೆಂದು ಕಣ್ಣಿರಿಟ್ಟರು.  ಕೊರೋನಾ ಹಾಗೂ ಮಳೆಯಿಂದ ಸಾಕಷ್ಟು ಸಮಸ್ಯೆಗಳಾಗಿವೆ. ಈ ವೇಳೆ ಸಾಲ ಮಾಡಿ ನೇಕಾರಿಕೆ ಮಾಡಿದ ಮನೆಯವರು ಮನನೊಂದು ಮೃತಪಟ್ಟಿದ್ದಾರೆ.  ಕೊರೋನಾ ಸಂಕಷ್ಟದಲ್ಲಿ ಮೂರು ತಿಂಗಳ ಕಾಲ ಆಹಾರ ವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾದರೂ ಯಾರೊಬ್ಬರೂ ಸಹಕಾರ ನೀಡಲಿಲ್ಲ ಎಂದು ಮೃತನ ಪತ್ನಿ  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಅವರ ಮುಂದೆ ಅಳಲು ತೊಡಿಕೊಂಡಿದ್ದಾರೆ.
ನಿಮ್ಮೆಲ್ಲ ಕಷ್ಟಗಳಿಗೆ ಸ್ಪಂಧಿಸುವುದಾಗಿ ಸತೀಶ್ ಭರವಸೆ ನೀಡಿದರು.  ನಿಮಗೆ ಬೇಕಾದ ಅಗತ್ಯ ವಸ್ತುಗಳನ್ನು ಕಲ್ಪಿಸುವುದಾಗಿ ಧೈರ್ಯ ಹೇಳಿದ್ದಾರೆ.
ಬೆಳಗಾವಿ ದಕ್ಷಿಣ ಮತಕೇತ್ರದ ಜನರ ಸಮಸ್ಯೆ ಆಲಿಸಿದ ಸತೀಶ ಜಾರಕಿಹೊಳಿ:
ಈ ವೇಳೆ ಬೆಳಗಾವಿ ದಕ್ಷಿಣ ಮತಕೇತ್ರ ವ್ಯಾಪ್ತಿಯಲ್ಲಿ  ಧಾರಾಕಾರವಾಗಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತವಾಗಿದೆ.  ನಿರಂತರ ಮಳೆಯಿಂದ   ಭತ್ತ   ನೀರಲ್ಲಿ ಮುಳಗಿ ಸಮಸ್ಯೆಗೆ ಸಿಲುಕ್ಕಿದ್ದಾರೆ.  ಈ  ಹಿನ್ನೆಲೆಯಲ್ಲಿ ಸತೀಶ ಜಾರಕಿಹೊಳಿ  ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ.
ಮಳೆಯಲ್ಲಿ  ಕ್ಷೇತ್ರ ದ  ದರ್ಶನ ಮಾಡಿ, ಮಳೆಯಿಂದ ಆಗಿರುವ ಅನಾಹುತಗಳನ್ನು, ಸಮಸ್ಯೆಗಳನ್ನು ಖುದ್ದಾಗಿ ಪರಶೀಲಿಸಿ, ಜನರ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.
ಕ್ಷೇತ್ರದಲ್ಲಿ  ರೈತರ ಅಳಲು:
ರೈತರ ಅದೆಷ್ಟೋ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಬೀಜ, ಗೊಬ್ಬರ ಖರೀದಿ ಮಾಡುವ ವಿಷಯದಲ್ಲಿ ರೈತ ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತ ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಸಿಗುವಂತಾಗಬೇಕಾಗಿದೆ ಎಂದು ಸ್ಥಳೀಯ ರೈತರು ಅಳಲು ತೊಡಿಕೊಂಡರು. ನಿಮ್ಮೆಲ್ಲ ಸಮಸ್ಯೆಗಳಿಗೆ ಸ್ಪಂದಿಸಲು ಅಧಿಕಾರಿಗಳ ಜತೆ ಚರ್ಚೆ ಮಾಡಲಾವುದು ಎಂದು ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪರಶುರಾಮ ಡಗೆ, ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಪ್ರದೀಪ ಎಂ ಜಿ. ರಾಘು ಬೋವಿ, ಕಾರ್ಯಕರ್ತರು ಹಾಗೂ ಇತರರು ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button