*ಹೈಕಮಾಂಡ್‌ ಮಟ್ಟದಲ್ಲಿ ಡಿಸಿಎಂ ಹುದ್ದೆ ಕುರಿತು ಚರ್ಚೆ ನಡೆದಿದ್ದು ನಿಜ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ನನಗೆ ಹಾಗೂ ಎಂ.ಬಿ. ಪಾಟೀಲ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಕುರಿತು ಪಕ್ಷದೊಳಗೆ ಚರ್ಚೆ ನಡೆದಿರುವುದು ನಿಜ. ಆದರೆ ಎಲ್ಲವನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಸಮಯ ಹಾಗೂ ಸಂದರ್ಭ ಬಂದಾಗ ಈ ಕುರಿತು ಮಾತನಾಡಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಹುದ್ದೆ ನೀಡುವ ವಿಚಾರ ಪಕ್ಷದ ಹಿತದೃಷ್ಟಿಯಿಂದ ಚರ್ಚೆಯಾಗುತ್ತಿತ್ತು. ಆದರೆ ನಾವು ಯಾವುದೇ ಬೇಡಿಕೆ ಇಟ್ಟಿಲ್ಲ. ಪಕ್ಷವೇ ನಮ್ಮನ್ನು ಗುರುತಿಸಬೇಕು. … Continue reading *ಹೈಕಮಾಂಡ್‌ ಮಟ್ಟದಲ್ಲಿ ಡಿಸಿಎಂ ಹುದ್ದೆ ಕುರಿತು ಚರ್ಚೆ ನಡೆದಿದ್ದು ನಿಜ: ಸಚಿವ ಸತೀಶ್ ಜಾರಕಿಹೊಳಿ*