Latest

*ಕಾಂಗ್ರೆಸ್‌ ಅಧಿಕಾರಕ್ಕೇರಲು ಯುವಕರು ಪಣ ತೊಡಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಕರೆ*

ಪ್ರಗತಿವಾಹಿನಿ ಸುದ್ದಿ; ಗೋಕಾಕ: 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಯಮಕನಮರಡಿ ಮತಕ್ಷೇತ್ರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗುತ್ತಿರುವುದು ಖುಷಿ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ನಗರದ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ಕುರಣಿ, ಖಲಕಂಬಾ ಗ್ರಾಮದ 200ಕ್ಕೂ ಹೆಚ್ಚು ಯುವಕರನ್ನು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಸರ್ವರ ಸರ್ವತೋಮುಖ ಪ್ರಗತಿ ಸಾಧ್ಯವಿದೆ ಎಂದು ತಿಳಿಸಿದರು.

2023ರಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಯುವಕರು ಪಣತೊಡಬೇಕು. ಅದಕ್ಕೆ ಬೇಕಾದ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ ಯೋಜನೆಗಳನ್ನು ಜನರಿಗೆ ತಿಳಿಸಬೇಕೆಂದು ಕರೆ ನೀಡಿದರು.

ಇದೇ ವೇಳೆ ಪಾಶ್ಚಾಪೂರ ಗ್ರಾಮದ ಮಹಿಳೆಯರ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷದ ಗ್ಯಾರೆಂಟಿ ಕಾರ್ಡ್ ಗಳನ್ನು ಮನೆ ಮನೆಗೆ ವಿತರಿಸಲು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಮುಖಂಡರಾದ ಕಮಲಪ್ಪಾ ಅಷ್ಟಗಿ, ಬಸವಣ್ಣಿ ನಾಯಿಕ, ಬಿಂಟು ಪಾಟೀಲ, ರಮೇಶ್ ಪಾಟೀಲ್‌ ಸೇರಿದಂತೆ ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪೂರ, ಕುರಣಿ, ಖಲಕಂಬಾ ಗ್ರಾಮದ ಹಲವು ಮುಖಂಡರು, ಮಹಿಳೆಯರು, ಯುವಕರು ಇದ್ದರು.

*ದಳಪತಿಗಳ ಕಾಲೆಳೆದ ಜೋಶಿ ಹೇಳಿದ್ದೇನು?*

https://pragati.taskdun.com/prahlad-joshireactionh-d-kumaraswamyhasana-ticket/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button