ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಲ್ಲಿನ ಎಪಿಎಂಸಿ (ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ) ಆವರಣಕ್ಕೆ ಇಂದು ಭೇಟಿ ಮಾಡಿ, ತರಕಾರಿ ಮಾರುಕಟ್ಟೆ ಸ್ಥಳಾಂತರದ ಬಗ್ಗೆ ಪರಿಶೀಲಿಸಿದರು.
ಕೊರೊನಾ ಹಿನ್ನೆಲೆಯಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಗೂ ವ್ಯಾಪಾರಿಗಳು ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ಎಪಿಎಂಸಿಯಲ್ಲಿನ ತರಕಾರಿ ಮಾರುಕಟ್ಟೆಯನ್ನು ಅಲ್ಲಿನ ಮಾರುಕಟ್ಟೆ ಜೊತೆಗೆ ಬೇರೆ ಎರಡು ಅಥವಾ ಮೂರು ಸ್ಥಳಗಳಿಗೆ ಸ್ಥಳಾಂತರ ಮಾಡುವ ಉದ್ದೇಶದಿಂದ ಅಧಿಕಾರಿಗಳು, ಜನಪ್ರತಿನಿಧಿಗಳು, ವರ್ತಕರು ಹಾಗೂ ವ್ಯಾಪಾರಿಗಳೊಂದಿಗೆ ಚರ್ಚೆ ನಡೆಸಿದರು.
ಕಳೆದ ಬಾರಿ ಕೊರೊನಾ ಸಂದರ್ಭದಲ್ಲಿ ಎಪಿಎಂಸಿ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು, ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗಿತ್ತು. ಹೀಗಾಗಿ, ಈ ಬಗ್ಗೆ ಸತೀಶ ಜಾರಕಿಹೊಳಿ ಅವರು ವಿಶೇಷ ಮುತುವರ್ಜಿ ವಹಿಸಿ, ಬೆಂಗಳೂರಿನಿಂದ ನಗರಕ್ಕೆ ಬಂದು, ನೇರವಾಗಿ ಮಾರುಕಟ್ಟೆ ವೀಕ್ಷಣೆಗೆ ತೆರಳಿದ್ದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಯುವರಾಜ್ ಕದಂ, ಮಾಜಿ ಅಧ್ಯಕ್ಷ ಆನಂದ ಪಾಟೀಲ ಸೇರಿ ಜನಪ್ರತಿನಿಧಿಗಳು, ಅಧಿಕಾರಿಗಳು, ವರ್ತಕರು ಹಾಗೂ ವ್ಯಾಪಾರಿಗಳು ಇದ್ದರು.
ಬೆಳಗಾವಿಯಲ್ಲಿ ಭಾಸ್ಕರ್ ರಾವ್ ಕಾರ್ಯಾಚರಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ