ಪ್ರಗತಿವಾಹಿನಿ ಸುದ್ದಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಪರಿಷ್ಕರಣೆ ಮಾಡುವಂತೆ ಹೈಕಮಾಂಡ್ ನಾಯಕರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ಆರಂಭವಾಗುತ್ತಿದ್ದಂತೆ ಸ್ವತ: ಸಚಿವರೇ ತಾವು ವರಿಷ್ಠರಿಗೆ ಹೇಳಿರುವುದೇನು ಎಂಬ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಗ್ಯಾರಂಟಿ ಯೋಜನೆಗಳನ್ನು ಸ್ಥಗಿತ ಮಾಡಿ ಎಂದು ನಾನು ಹೇಳಿಲ್ಲ. ಯೋಜನೆಗಳನ್ನು ಕಡಿತಗೊಳಿಸುವಂತೆಯೂ ಹೇಳಿಲ್ಲ. ಆದರೆ ಉಳ್ಳವರಿಗೆ, ಶ್ರೀಮಂತರಿಗೆ ಯೋಜನೆಗಳನ್ನು ಕೊಡುವುದು ಬೇಡ. ಈ ಬಗ್ಗೆ ಜನರು ಕೂಡ ಮಾತನಾಡುತ್ತಿದ್ದು, ಜನರ ಅಭಿಪ್ರಾಯವನ್ನು ಹೈಕಮಾಂಡ್ ಗೆ ತಿಳಿಸಿದ್ದೇನೆ ಎಂದಿದ್ದಾರೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ಜನರ ಅಭಿಪ್ರಾಯ ಪಡೆದು ಪರಿಷ್ಕರಿಸಿ ಎಂದು ಹೇಳಿದ್ದೇನೆ ಹೊರತು ಕಡಿತಗೊಳಿಸಿ ಎಂದು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಶಾಸಕರಿಗೆ ಅನುದಾನ ಕೊರತೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಶಾಸಕರಿಗೆ ಅನುದಾನ ಕೊರತೆ ಆಗಿಲ್ಲ. ಬಿಜೆಪಿ ಸರಕಾರ ಇದ್ದಾಗಿನದಕ್ಕಿಂತ ಹೆಚ್ಚು ಅನುದಾನ ಸಿಗುತ್ತಿದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ