Kannada NewsKarnataka NewsLatestPolitics

*ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ ಎಂದು ಸ್ಪಷ್ಟ ಪಡಿಸಿದ ನಳೀನ್ ಕುಮಾರ್ ಕಟೀಲ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸೋಲಿನ ಬಳಿಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬೆಳಿಗ್ಗೆಯಷ್ಟೇ ಬಳ್ಳಾರಿಯಲ್ಲಿ ಹೇಳಿಕೆ ನಿಡಿದ್ದ ನಳೀನ್ ಕುಮಾರ್ ಕಟೀಲ್, ಕೆಲ ಹೊತ್ತಲ್ಲೇ ರಾಜೀನಾಮೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Home add -Advt

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ನನ್ನ ಹೇಳಿ ತಪ್ಪಾಗಿ ಅರ್ಥೈಸಿ ಸುದ್ದಿ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ಚುನಾವಣೆ ಸೋಲಿನ ನೈತಿಕ ಹೊಣೆಹೊರುತ್ತೇನೆ ಎಂದು ತಿಳಿಸಿದ್ದಾರೆ.

ಸೋಲಿನ ಕಾರಣಗಳ ಬಗ್ಗೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. ಕಳೆದ ನಾಲ್ಕು ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ. ರಾಜ್ಯಾಧ್ಯಕ್ಷರ ನೇಮಕದ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.


Related Articles

Back to top button