
ಪ್ರಗತಿವಾಹಿನಿ ಸುದ್ದಿ: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಹಿಂದೂ ಧರ್ಮಕ್ಕೆ ನಿಂದನೆ ಮಾಡುವ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಪ್ರಯತ್ನ ಮಾಡಲಾಗಿದೆ ಎಂದು 2022ರಲ್ಲಿ ವಕೀಲ ಕೆ.ದಿಲೀಪ್ ಕುಮಾರ್ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು.
ಈ ದೂರು ಪರಿಗಣಿಸಿದ ನ್ಯಾ.ಕೆ.ಎನ್.ಶಿವಕುಮಾರ್ ಅವರಿದ್ದ ಪೀಠ ಆಗಸ್ಟ್ 27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸಮನ್ಸ್ ಜಾರಿ ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ