Karnataka News

*ಭಾರಿ ಮಳೆ: ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕೊಡಗು, ಮೈಸೂರಿಲ್ಲಿ ಭಾರಿ ಮಳೆಯಾಗುತ್ತಿದೆ. ಹೀಗಾಗಿ ಕೊಡಗು ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿದೆ. 

ನದಿ ಪಾತ್ರದ ನಿವಾಸಿಗಳಿಗೆ ಪ್ರವಾಹದ ಆತಂಕ ಎದುರಾಗಿದೆ. ಹೀಗಾಗಿ, ಎರಡು ದಿನಗಳ ಕಾಲ ಕೊಡಗಲ್ಲಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಎಲ್ಲ ಕಾಲೇಜುಗಳಿಗೆ ಮೇ 26 ಮತ್ತು 27 ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. 

Home add -Advt

ಇನ್ನೂ ಮೈಸೂರಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇವತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Related Articles

Back to top button