Kannada NewsKarnataka NewsLatestPolitics

*ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಿ: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ಯಾವುದೇ ನಾಮಫಲಕ ಇರಲಿ, ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡಿ, ಆಮೇಲೆ ಉಳಿದ ಭಾಷೆ ಹಾಕಬಹುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ಕಡ್ಡಾಯ ಎಂಬ ಕನ್ನಡಪರ ಹೋರಾಟಗಾರರ ವಿಷಯಕ್ಕೆ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಎಲ್ಲರೂ ಮೊದಲ ಆದ್ಯತೆ ನೀಡಬೇಕು. ಸರ್ಕಾರವು ಈ ವಿಷಯಕ್ಕೆ ಬದ್ಧವಿದೆ. ಖಾಸಗಿಯರು ಸ್ವಪೇರಿತವಾಗಿ ಕನ್ನಡ ಭಾಷೆಯ ನಾಮಫಲಕ ಹಾಕಬೇಕೆಂದು ತಿಳಿಸಿದರು.

ಸುಳಗಾ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಯಾವುದೇ ಭಾಷೆ, ಧರ್ಮ ಇರಲಿ, ಯಾರ ಭಾವನೆಗಳಿಗೂ ಧಕ್ಕೆ ಬಾರದಂತೆ ಎಲ್ಲರೂ ನಡೆದುಕೊಳ್ಳಬೇಕು. ಕಾನೂನು ಕೈಗೆತ್ತಿಕೊಂಡರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಳಗಾವಿ ನಗರದಲ್ಲಿ ಯುಜಿಡಿ ವ್ಯವಸ್ಥೆ, ಬೋರ್‌ ವೆಲ್‌ ಗೆ ಕೊಳಚೆ ನೀರು ಸೇರ್ಪಡೆ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿ, ನಾಳೆ ಸಂಬಂಧಿಸಿದ ಸಚಿವರು ಬೆಳಗಾವಿಗೆ ಆಗಮಿಸುತ್ತಿದ್ದು, ಸಮಸ್ಯೆಗಳ ಪಟ್ಟಿಯನ್ನು ಸಿದ್ದಪಡಿಸುತ್ತಿದ್ದು, ಬೋರ್‌ ವೆಲ್‌ ಗೆ ಕೊಳಚೆ ನೀರು ಸೇರ್ಪಡೆಯಾಗದಂತೆ ಶೀಘ್ರವೇ ಕ್ರಮ ಕೈಗೊಳ್ಳಲು ತಿಳಿಸುತ್ತೇನೆಂದ ಸಚಿವರು, ಬೆಳಗಾವಿ ಜಿಲ್ಲೆಯ 350 ಪೌರ ಕಾರ್ಮಿಕರಿಗೆ ನಾಳೆ ನೇಮಕಾತಿ ಆದೇಶ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button