*ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಿ: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ಯಾವುದೇ ನಾಮಫಲಕ ಇರಲಿ, ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡಿ, ಆಮೇಲೆ ಉಳಿದ ಭಾಷೆ ಹಾಕಬಹುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ಕಡ್ಡಾಯ ಎಂಬ ಕನ್ನಡಪರ ಹೋರಾಟಗಾರರ ವಿಷಯಕ್ಕೆ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಎಲ್ಲರೂ ಮೊದಲ ಆದ್ಯತೆ ನೀಡಬೇಕು. ಸರ್ಕಾರವು ಈ ವಿಷಯಕ್ಕೆ … Continue reading *ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಿ: ಸಚಿವ ಸತೀಶ್‌ ಜಾರಕಿಹೊಳಿ*