Kannada NewsKarnataka NewsLatestNationalPolitics

*ಸಚಿವ ಸತೀಶ ಜಾರಕಿಹೊಳಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೇಂದ್ರ ಸಚಿವ ಗಡ್ಕರಿ*

39 ಯೋಜನೆಗಳ ವಿಚಾರ ಯಶಸ್ವಿಯಾಗಿ ಇತ್ಯರ್ಥ

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯದಲ್ಲಿ ರಸ್ತೆ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ದೀರ್ಘಕಾಲ ಬಾಕಿ ಉಳಿದಿದ್ದ 48 ರಸ್ತೆ ಯೋಜನೆಗಳಲ್ಲಿ, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ 39 ಯೋಜನೆಗಳ ವಿಚಾರವನ್ನು ಯಶಸ್ವಿಯಾಗಿ ಇತ್ಯರ್ಥಪಡಿಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಬುಧವಾರ ನವದೆಹಲಿಯ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಸಲ್ಲಿಸಿದ ಮನವಿಯನ್ನು ಸ್ವೀಕರಿಸಿ, ಕರ್ನಾಟಕದ ರಾಜ್ಯದಲ್ಲಿ ರಸ್ತೆ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.

ಈ ವೇಳೆ ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಹಾಗೂ ರಾಜ್ಯದಲ್ಲಿನ ಬಾಕಿ ಉಳಿದಿರುವ ರಸ್ತೆ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಕೇಂದ್ರ ಸಚಿವರಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಚಿವ ಸತೀಶ್‌ ಜಾರಕಿಹೊಳಿ ಅವರು ಕೋರಿದರು.

Home add -Advt

ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಸಂಪೂರ್ಣ ಸಹಕಾರವನ್ನು ಕೋರಿದ ಸಂದರ್ಭದಲ್ಲಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹನುಮಣ್ಣವರ, ಅಖಿಲ ಭಾರತ್‌ ಕಾಂಗ್ರೆಸ್‌ ಕಮಿಟಿ ಎಸ್ಟಿ ಘಟಕದ ಉಪಾಧ್ಯಕ್ಷ ರಾಮಪ್ಪ ಟಿ.ಆರ್‌ ಸೇರಿದಂತೆ ರಾಜ್ಯ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button