Belagavi NewsBelgaum NewsKarnataka NewsLatestPolitics

*ಸತೀಶ್ ಜಾರಕಿಹೊಳಿ ಪಿಎ ನಿವಾಸದ ಮೇಲೂ ಇಡಿ ದಾಳಿ*

ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರಿಗೆ ಸೇರಿದ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸ, ಬೆಳಗಾವಿಯ ಗೋಕಾಕ್ ನಲ್ಲಿರುವ ನಿವಾಸ, ಅವರ ಮಕ್ಕಳಿಗೆ ಸೇರಿದ ಜಾಗ ಹಾಗೂ ಸತೀಶ್ ಜಾರಕಿಹೊಳಿ ಅವರ ಆಪ್ತರ ಮನೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಇದರ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಅವರ ಪಿಎ ಮಲಗೌಡ ಪಾಟೀಲ್ ಅವರ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳೀದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button